Wednesday, June 24, 2026
Homeಚಿಕ್ಕಮಗಳೂರುಚಿಕ್ಕಮಗಳೂರು; ಶಾಸಕ ಶ್ರೀನಿವಾಸ್ ಅಭಿನಂದನಾ ಕಾರ್ಯಕ್ರಮದಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ

ಚಿಕ್ಕಮಗಳೂರು; ಶಾಸಕ ಶ್ರೀನಿವಾಸ್ ಅಭಿನಂದನಾ ಕಾರ್ಯಕ್ರಮದಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ

- Advertisement -
- Advertisement -

ಚಿಕ್ಕಮಗಳೂರು: ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ.

ತರೀಕೆರೆ ಶಾಸಕ ಶ್ರೀನಿವಾಸ್ ಅವರಿಗೆ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಈ ವೇಳೆ ಆರ್ಕೇಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರಕ್ಕೆ ಗಲಾಟೆ ನಡೆದಿದ್ದು, ಆಗ ವ್ಯಕ್ತಿಯೊಬ್ಬ ವರುಣ್ (28) ಎಂಬುವವರಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ಘಟನೆಯಲ್ಲಿ ಮಂಜು ಹಾಗೂ ಸಂಜು ಎಂಬುವವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!