Saturday, June 6, 2026
Homeಕರಾವಳಿಉಡುಪಿಉಡುಪಿಯಲ್ಲಿ ಹಾಡಹಗಲೇ ಯುವಕನನ್ನು ಚಾಕುವಿನಿಂದ ಇರಿದು ಕೊಲೆ

ಉಡುಪಿಯಲ್ಲಿ ಹಾಡಹಗಲೇ ಯುವಕನನ್ನು ಚಾಕುವಿನಿಂದ ಇರಿದು ಕೊಲೆ

- Advertisement -
- Advertisement -

ಡುಪಿ : ಹಾಡಹಗಲೇ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಕಾಪು ಠಾಣಾ ವ್ಯಾಪ್ತಿಯ ಪಾಂಗಾಳ ಎಂಬಲ್ಲಿ ನಡೆದಿದೆ.

ಶರತ್ ಶೆಟ್ಟಿ (39) ಕೊಲೆಯಾದ ದುರ್ದೈವಿ. ಜಾಗದ ವ್ಯವಹಾರಕ್ಕೆ ಕೊಲೆ ನಡೆದಿದೆ ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇಬ್ಬರು ದುಷ್ಕರ್ಮಿಗಳು ಶರತ್ ಮೇಲೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾರೆ. ಕೂಡಲೇ ಶರತ್ ರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಶರತ್ ಮೃತಪಟ್ಟಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಸಿಸಿಟಿವಿ ದೃಶ್ಯದ ಮೇರೆಗೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.

- Advertisement -

Latest News

error: Content is protected !!