Thursday, June 4, 2026
Homeಕರಾವಳಿಬಂಟ್ವಾಳ: ಡಿವೋರ್ಸ್ ಪ್ರಕರಣದ ವಿಚಾರಣೆಗೆ ಆಗಮಿಸಿದ್ದ ವ್ಯಕ್ತಿ ವಿಚಾರಣೆ ವೇಳೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಬಂಟ್ವಾಳ: ಡಿವೋರ್ಸ್ ಪ್ರಕರಣದ ವಿಚಾರಣೆಗೆ ಆಗಮಿಸಿದ್ದ ವ್ಯಕ್ತಿ ವಿಚಾರಣೆ ವೇಳೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

- Advertisement -
- Advertisement -

ಬಂಟ್ವಾಳ:  ಡಿವೋರ್ಸ್ ಪ್ರಕರಣದ ವಿಚಾರಣೆಗೆ ಆಗಮಿಸಿದ್ದ ವ್ಯಕ್ತಿ ವಿಚಾರಣೆ ವೇಳೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಿ.ಸಿ.ರೋಡಿನಲ್ಲಿ ನಡೆದಿದೆ.

ಮಹಾರಾಷ್ಟ್ರ ಮೂಲದ ವ್ಯಕ್ತಿ ಪ್ರಕಾಶ್‌ ಚೌಗಲೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಪ್ರಕಾಶ್  ಬಿ.ಸಿ.ರೋಡಿನ ಮಹಿಳೆಯನ್ನು ಪ್ರೀತಿಸಿ ವಿವಾಹವಾಗಿದ್ದರು. ಆಧರೆ ಬಳಿಕ ಇವರಿಬ್ಬರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿ ವಿವಾಹ ವಿಚ್ಛೇದನದ ಹಂತಕ್ಕೆ ತಲುಪಿತ್ತು.

ಇದೇ ವಿಚಾರವಾಗಿ ಮಹಿಳೆಯ ದೂರಿನ ಆಧಾರದಲ್ಲಿ ಬಂಟ್ವಾಳ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದ ವೇಳೆ ಪ್ರಕಾಶ್ ಬಾಟಲಿಯಲ್ಲಿ ತಂದಿದ್ದ ವಿಷವನ್ನು ಏಕಾಏಕಿ ಕುಡಿದಿದ್ದಾರೆ. ಇದರಿಂದ ಆತಂಕಗೊಂಡ ಅಧಿಕಾರಿಗಳು ತತ್‌ ಕ್ಷಣ ಆತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇನ್ನು ಇವರು  ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡು ಬಂದಿದ್ದರು ಎನ್ನಲಾಗಿದ್ದು, ವಿಷದ ಬಾಟಲ್‌ ಜೊತೆಗೆ ಡೆತ್‌ ನೋಟ್‌ ಕೂಡ ಬರೆದುಕೊಂಡು ಬಂದಿದ್ದ ಎನ್ನಲಾಗಿದೆ. ಸಿಡಿಪಿಒ ಅಧಿಕಾರಿಗಳ ಮಾಹಿತಿಯಂತೆ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!