Thursday, June 4, 2026
Homeಕರಾವಳಿಮಂಗಳೂರುಸುಳ್ಯ; ಕೆಎಸ್ ಆರ್ ಟಿಸಿ ಬಸ್ ನಲ್ಲಿ ಅಪ್ರಾಪ್ತೆಗೆ ಕಿರುಕುಳ; ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಸುಳ್ಯ; ಕೆಎಸ್ ಆರ್ ಟಿಸಿ ಬಸ್ ನಲ್ಲಿ ಅಪ್ರಾಪ್ತೆಗೆ ಕಿರುಕುಳ; ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

 ಸುಳ್ಯ; ಕೆಎಸ್ ಆರ್ ಟಿಸಿ ಬಸ್ ನಲ್ಲಿ ಅಪ್ರಾಪ್ತೆಗೆ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಸುಳ್ಯದಲ್ಲಿ ನಡೆದಿದೆ.

ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿ ಸೇರಿದಂತೆ ಆಕೆ ಮನೆಯವರು ಪುತ್ತೂರಿನಿಂದ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದರು.ಈ ವೇಳೆ ಪುತ್ತೂರಿನಲ್ಲಿ ಬಸ್ ಹತ್ತಿದ ಪಾಣಾಜೆಯ ಅಬ್ದುಲ್ ಕುಂಞಿ ಎಂಬುವವ ಬಸ್ ನಲ್ಲಿದ್ದ ಬಾಲಕಿಯ ಮೈ ಮುಟ್ಟಿದನೆನ್ನಲಾಗಿದೆ.ಕೂಡಲೇ ಬಾಲಕಿ ಬಸ್ ನಲ್ಲಿದ್ದ ತನ್ನ ಮನೆಯವರಿಗೆ ತಿಳಿಸಿದ್ದಾಳೆ.ಮಾತ್ರವಲ್ಲ ಆ ವ್ಯಕ್ತಿ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದನ್ನು ಬಸ್ ನಲ್ಲಿದ್ದವರು ನೋಡಿದ್ದಾರೆ ಎನ್ನಲಾಗಿದೆ. ಬಳಿಕ ಆಕೆಯ ಮನೆಯವರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದು ,ಇದೀಗ ಅಬ್ದುಲ್ ಕುಂಞಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ

- Advertisement -

Latest News

error: Content is protected !!