- Advertisement -
![]()
- Advertisement -
ಮಂಗಳೂರು: ನಗರದ ಕುಂಟಿಕಾನ ಬಳಿಯ ಲೋಹಿತ್ ನಗರದಲ್ಲಿ ಇಂದು ಬೆಳಗ್ಗೆ ಸುಮಾರು 10 ಗಂಟೆಗೆ ಧರೆ ಕುಸಿದು ಉರ್ವ ಅಶೋಕನಗರದ ನಿವಾಸಿ, ಗುತ್ತಿಗೆದಾರ ಆಂಟನಿ ಮಸ್ಕರೇನ್ಹಸ್ (65) ಎಂಬುವವರು ಮೃತಪಟ್ಟಿದ್ದಾರೆ.
ಕಳೆದ ವರ್ಷದ ಮಳೆಗಾಲದಲ್ಲಿ ಮೇಲ್ಭಾಗದ ಮನೆಯೊಂದರ ಮಣ್ಣು ಜರಿದಿದ್ದರಿಂದ, ಅಲ್ಲಿ ಆವರಣ ಗೋಡೆ ನಿರ್ಮಿಸಲು ಉದ್ದೇಶಿಸಲಾಗಿತ್ತು. ಅದರಂತೆ ಆಂಟನಿ ಅವರು ಇತರ ನಾಲ್ವರು ಕಾರ್ಮಿಕರೊಂದಿಗೆ ಸೇರಿ ಗೋಡೆ ನಿರ್ಮಾಣಕ್ಕಾಗಿ ಸ್ಥಳದಲ್ಲಿ ಅಳತೆ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಮಣ್ಣು ಕುಸಿದು ಬಿದ್ದಿದೆ.
ವಿಷಯ ತಿಳಿಯುತ್ತಿದ್ದಂತೆ ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಅವರನ್ನು ಮಣ್ಣಿನಡಿಯಿಂದ ಹೊರತೆಗೆದರು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ತೀವ್ರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
- Advertisement -


