ಹುಬ್ಬಳ್ಳಿ; 5 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರಗೈದ ಪಾಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ರಿತೇಶ್ ಕುಮಾರ್ ಕೊಲೆಯಾದ ಆರೋಪಿ.
ಹುಬ್ಬಳ್ಳಿಯ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ವರ್ಷದ ಬಾಲಕಿಯನ್ನು ಆರೋಪಿ ರಿತೇಶ್ ಅಪಹರಿಸಿ ಕೊಲೆ ಮಾಡಿದ್ದ. ಆರೋಪಿಯನ್ನು ಪೊಲೀಸರು ಬಂಧಿಸಲು ಹೋದಾಗ ಪೊಲೀಸರ ಮೇಲೆಯೇ ದಾಳಿಗೆ ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದು ಅದು ಆತನ ಬೆನ್ನಿಗೆ ತಾಗಿ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಅಶೋಕ್ ನಗರ ಪೊಲೀಸ್ ಠಾಣೆ ಪಿ ಎಸ್ ಐ ಹಾಗೂ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಮಾತನಾಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಆರೋಪಿ ರಿತೇಶ್ ಕುಮಾರ್ ಮೂರು ತಿಂಗಳ ಹಿಂದೆಯಷ್ಟೇ ಹುಬ್ಬಳ್ಳಿಗೆ ಬಂದಿದ್ದ. ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ, ಕರೆದುಕೊಂಡು ಹೋದ ಸಿಸಿಟಿವಿ ದೃಶ್ಯ ಸೆರೆಯಾಗಿತ್ತು.
ಅದನ್ನು ಆಧರಿಸಿ ಪೊಲೀಸರು ಮಿಂಚಿನ ಕಾರ್ಯಾಚರಣೆ ಕೈಗೊಂಡು ಆತನ ಹೆಡೆಮುರಿ ಕಟ್ಟಿದ್ದರು. ಆದರೆ ಹೆಚ್ಚಿನ ತನಿಖೆಗೆ ಕೃತ್ಯ ನಡೆದ ಸ್ಥಳಕ್ಕೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಆತ ಪೊಲೀಸರ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಲು ಮುಂದಾಗಿದ್ದ. ಇದರಿಂದ ಮೂವರು ಪೊಲೀಸರು ಗಾಯಗೊಂಡಿದ್ದರು. ಇನ್ನು ಎನ್ ಕೌಂಟರ್ ಮಾಡಿದ ಪಿಎಸ್ ಐ ಅನ್ನಪೂರ್ಣ ಅವರ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.