Tuesday, July 14, 2026
Homeಕರಾವಳಿಮಂಗಳೂರುಕಡಬ; ಕಾಡು ಹಂದಿಯ ಮಾಂಸ ನೀಡುವುದಾಗಿ ಹಣ ಪಡೆದು ವಂಚಿಸುತ್ತಿದ್ದಾತ ಕೊನೆಗೂ ಅರೆಸ್ಟ್

ಕಡಬ; ಕಾಡು ಹಂದಿಯ ಮಾಂಸ ನೀಡುವುದಾಗಿ ಹಣ ಪಡೆದು ವಂಚಿಸುತ್ತಿದ್ದಾತ ಕೊನೆಗೂ ಅರೆಸ್ಟ್

- Advertisement -
- Advertisement -

ಕಡಬ; ಕಾಡು ಹಂದಿಯ ಮಾಂಸ ನೀಡುವುದಾಗಿ ಹಣ ಪಡೆದು ವಂಚಿಸುತ್ತಿದ್ದಾತ ಕೊನೆಗೂ ಅರೆಸ್ಟ್ ಆಗಿದ್ದಾನೆ.

ಕುಲ್ಕುಂದದಲ್ಲಿ  ನಏ.15 ರಂದು ಕಾಡು ಹಂದಿಯ ಮಾಂಸ ನೀಡುವುದಾಗಿ ಹಣ ಪಡೆದು  ವಂಚಿಸಲು ಯತ್ನಿಸುತ್ತಿದ್ದಾಗ  ಆತನನ್ನು ಗ್ರಾಮಸ್ಥರೇ  ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಧ್ಯಾಹ್ನದ ವೇಳೆ ಕುಲ್ಕುಂದದಲ್ಲಿ   ಬಸ್ಸಿಗೆ ಕಾಯುತ್ತಿದ್ದ ಮಹಿಳೆಯೊಬ್ಬರಿಗೆ  ಕಾಡು ಹಂದಿ ಉರುಳಿಗೆ ಬಿದ್ದಿದ್ದು ಮಾಂಸ ಬೇಕಾದರೆ ಹೇಳಿ ಎಂದು ಈತ  ಹೇಳಿದ್ದ.  ಮಹಿಳೆಯು ನಿರಾಕರಿಸಿ ಅಲ್ಲಿನ ಸ್ಥಳೀಯರಿಗೆ ಮಾಹಿತಿ ನೀಡಿದ್ದರು.  ಈ ಸಂದರ್ಭ ಈ ಹಿಂದೆ ಹಣ ನೀಡಿ ಈತನಿಂದಲೇ ಮೋಸ ಹೋದ ವ್ಯಕ್ತಿಯೊಬ್ಬರು ಬಂದಿದ್ದಾರೆ. ಅವರು ಈತನನ್ನು ಪ್ರಶ್ನಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರ ವಿಚಾರಣೆ ಈತ ಕಡಬ ತಾಲೂಕಿನ ಮರ್ದಾಳದ ವ್ಯಕ್ತಿ ಎಂದು ತಿಳಿದು ಬಂದಿದ್ದು  ಹಲವರಿಗೆ ವಿವಿಧ ರೀತಿಯಲ್ಲಿ  ವಂಚಿಸಿರುವುದು ತಿಳಿದು ಬಂದಿದೆ. ದೂರು ನೀಡಲು ಯಾರು ಮುಂದೆ ಬಾರದ ಕಾರಣ ಆತನನ್ನು ವಿಚಾರಿಸಿ  ಬಿಟ್ಟಿರುವುದಾಗಿ ಸುಬ್ರಹ್ಮಣ್ಯ ಪೊಲೀಸರು ಮಾಹಿತಿ ನೀಡಿದ್ದಾರೆ . ಈತ ಕಟ್ಟಿಗೆ ಇದೆ ಎಂದು ಹೇಳಿ ಕುಲ್ಕುಂದ ಭಾಗದಲ್ಲಿಯೂ ಮುಂಗಡ ಹಣ ಪಡೆದಿದ್ದ ಎನ್ನಲಾಗಿದೆ.

ಸದ್ಯ ಈತನ ಪೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಹಂಚಿಕೊಂಡು ಮೋಸ ಹೋಗದಂತೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಈತ ಫೆಬ್ರವರಿ ತಿಂಗಳಲ್ಲಿ ಕೆಡ್ಡಸದ ಸಂದರ್ಭ  ಎಡಮಂಗಲದಲ್ಲಿ  ವ್ಯಕ್ತಿಯೊಬ್ಬರು  ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಬೈಕ್ ನಲ್ಲಿ ಬಂದು   “ಹಂದಿ ಮಾಂಸ ಇದೆ, ಬೇಕಾದರೆ ಕೊಡುತ್ತೇನೆ ಎಂದು ಹೇಳಿ ಹಲವರಿಂದ  ಹಣ ಪಡೆದು  ಹಿರಿಯ ವ್ಯಕ್ತಿಯನ್ನು ಪಾಲೋಲಿ ಸೇತುವೆ ಬಳಿ  ಬೈಕ್ ನಿಂದ ಇಳಿಸಿ ಕ್ಷಣಮಾತ್ರದಲ್ಲಿ ಹಂದಿ ಮಾಂಸ ತರುವುದಾಗಿ ಹೇಳಿ  ವಂಚಿಸಿದ್ದ. ವಂಚಿಸಿದ ವ್ಯಕ್ತಿತನ್ನ ಬೈಕ್ ನಲ್ಲಿ ಹೋಗುತ್ತಿರುವ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿತ್ತು.ಆ ಸಂದರ್ಭದಲ್ಲಿ ಯಾರೂ ಠಾಣೆಗೆ ದೂರು ನೀಡದ ಕಾರಣ ಪೊಲೀಸರು ಗಂಭೀರವಾಗಿ ಪರಿಗಣಿಸಿರಲಿಲ್ಲ.

- Advertisement -

Latest News

error: Content is protected !!