Thursday, July 16, 2026
Homeಕರಾವಳಿಮಂಗಳೂರುಬಂಟ್ವಾಳ; ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು ಪ್ರಕರಣ; ನಾಪತ್ತೆಯಾದ ವ್ಯಕ್ತಿಯ ಮೃತದೇಹ ಪತ್ತೆ

ಬಂಟ್ವಾಳ; ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು ಪ್ರಕರಣ; ನಾಪತ್ತೆಯಾದ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಬಂಟ್ವಾಳ; ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಬಳಿ ನಿನ್ನೆ ಸಂಜೆ ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋಗಿ  ನೀರುಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.  ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಸಮೀಪ ಅವರು ನೀರುಪಾಲಾದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಅವರ ಶವ ಪತ್ತೆಯಾಗಿದೆ.ನಿನ್ನೆ ಸಂಜೆಯಿಂದಲೇ ಅಗ್ನಿಶಾಮಕ ದಳದವರು ಆಗಮಿಸಿ ಹುಡುಕಾಟ ನಡೆಸಿದ್ದರು. ಕತ್ತಲಾದ್ದರಿಂದ ಇಂದು ಬೆಳಗ್ಗೆ ಮತ್ತೆ ಹುಡುಕಾಟ ಮುಂದುವರೆಸಿದ್ದರು.ಈಗ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.

ಘಟನೆ ವಿವರ:

ಮೈಕಲ್ ಅವರು ಸುರತ್ಕಲ್ ನಿಂದ ಸರಪಾಡಿ ಸಮೀಪದ ಮಾವಿನ ಕಟ್ಟೆ ಎಂಬಲ್ಲಿಯ ನೆಂಟರ ಮನೆಗೆ ಬಂದಿದ್ದರು. ಅಲ್ಲಿಂದ ನಾಲ್ಕು ಮಂದಿ  ನಿನ್ನೆ ಸಂಜೆ ಗಾಳ ಹಾಕಿ ಮೀನು ಹಿಡಿಯಲು ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಸಮೀಪದ ಕಿಂಡಿ ಅಣೆಕಟ್ಟು ಬಳಿ ಬಂದಿದ್ದರು. ಇಲ್ಲಿ ಮೀನು ಹಿಡಿಯುತ್ತಿರುವಾಗ ಮೈಕಲ್  ಆಯ ತಪ್ಪಿ ನೇತ್ರಾವತಿ ನದಿಗೆ ಬಿದ್ದು ನಾಪತ್ತೆಯಾಗಿದ್ದರು.

- Advertisement -

Latest News

error: Content is protected !!