Tuesday, June 9, 2026
Homeಅಪರಾಧಪುತ್ತೂರು : ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು!

ಪುತ್ತೂರು : ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು!

- Advertisement -
- Advertisement -

ಪುತ್ತೂರು : ಸ್ಕೂಟರ್ ಮತ್ತು ಲಾರಿ ನಡುವೆ ಮಂಗಳವಾರ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಹಸವಾರ ಇಂದು ಮೃತಪಟ್ಟ ಘಟನೆ ಪುತ್ತೂರಿನಿಂದ ವರದಿಯಾಗಿದೆ.

ವಸಂತ ರೈ ಬಳ್ಳಮಜಲು ಮೃತಪಟ್ಟ ವ್ಯಕ್ತಿ.ಇವರು ಎಂದಿನಂತೆ ತಮ್ಮ ಕೆಲಸ ಮುಗಿಸಿಕೊಂಡು ಕುರಿಯ ನಿವಾಸಿ ನಾರಾಯಣ ಬಳ್ಳಮಜಲು ಎಂಬವರೊಂದಿಗೆ ತೆರಳುತ್ತಿದ್ದ ವೇಳೆ ಸ್ಕೂಟರ್ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿತ್ತು. ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಇಬ್ಬರನ್ನೂ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದು ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ವಸಂತ ರೈ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!