Sunday, June 2, 2024
Homeತಾಜಾ ಸುದ್ದಿಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ;ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ;ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

spot_img
- Advertisement -
- Advertisement -

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ  ಹೆಸರು ಬರೆದಿಟ್ಟು ಕಾರಿನಲ್ಲೇ ತಲೆಗೆ‌ ಗುಂಡು ಹಾರಿಸಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ದಕ್ಷಿಣ ತಾಲೂಕಿನ ನೆಟ್ಟಿಗೆರೆ ಗ್ರಾಮದ ಬಳಿ ನಡೆದಿದೆ.

ಹೆಚ್‌ಎಸ್‌ಆರ್ ಲೇಔಟ್‌ ನಿವಾಸಿ ಪ್ರದೀಪ್ (47) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಡೆತ್​ನೋಟ್​ನಲ್ಲಿ ಮಹದೇವಪುರ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 6 ಪ್ರಭಾವಿ ರಾಜಕಾರಣಿಗಳ ಹೆಸರನ್ನು ಉಲ್ಲೇಖಿಸಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾಜಿ ಸಚಿವ ಅರವಿಂದ ಲಿಂಬಾವಳಿ, ಜಿ.ರಮೇಶ್‌ ರೆಡ್ಡಿ, ಕೆ.ಗೋಪಿ‌, ಜಯರಾಮ್ ರೆಡ್ಡಿ, ರಾಘವ ಭಟ್, ಸೋಮಯ್ಯ ಹೆಸರು ಉಲ್ಲೇಖಿಸಿ 6 ಜನರ ಮೇಲೆ ಕ್ರಮ ಜರುಗಿಸಿ ನನ್ನ ಸಾವಿಗೆ ನ್ಯಾಯ ಒದಗಿಸಿ ಎಂದು ಪ್ರದೀಪ್ ಡೆತ್​ನೋಟ್​ನಲ್ಲಿ ಮನವಿ ಮಾಡಿದ್ದಾರೆ. ಹೆಸರಿನ ಮುಂದೆ ಮೊಬೈಲ್ ನಂಬರ್ ಬರೆದು ಪ್ರದೀಪ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಕಾಸಿನ ವ್ಯವಹಾರದಲ್ಲಿ ವಂಚನೆ ಸಂಬಂಧ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆ.ಗೋಪಿ‌ ಮತ್ತು ಸೋಮಯ್ಯ ಅವರಿಗೆ ಅರವಿಂದ ಲಿಂಬಾವಳಿ ಅವರು ಬೆಂಬಲ ನೀಡಿದ್ದಾರೆ ಎಂದು ಪ್ರದೀಪ್ ಹೇಳಿದ್ದಾರೆ.

ನಿನ್ನೆ ಹೊಸ ವರ್ಷಾಚರಣೆ ಹಿನ್ನಲೆ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಕುಟುಂಬ ಸಮೇತರಾಗಿ ಪ್ರದೀಪ್ ರೆಸಾರ್ಟ್‌ವೊಂದಕ್ಕೆ ಹೋಗಿದ್ದರು ಎಂದು ತಿಳಿದುಬಂದಿದೆ. ಸದ್ಯ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡ ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಾಮನಗರ ಎಸ್‌ಪಿ ಸಂತೋಷ್ ಬಾಬು ಕೂಡ ಆಗಮಿಸಿದ್ದಾರೆ.

- Advertisement -
spot_img

Latest News

error: Content is protected !!