Friday, May 3, 2024
HomeWorldಅಫ್ಗಾನಿಸ್ತಾನದಿಂದ ಭಾರತಕ್ಕೆ ಬಂದವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ !

ಅಫ್ಗಾನಿಸ್ತಾನದಿಂದ ಭಾರತಕ್ಕೆ ಬಂದವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ !

spot_img
- Advertisement -
- Advertisement -

ನವದೆಹಲಿ :ಕೋವಿಡ್-19 ಸಾಂಕ್ರಾಮಿಕ ರೋಗದ ಮುನ್ನೆಚ್ಚರಿಕೆಯ ಕ್ರಮವಾಗಿ ಕೇಂದ್ರ ಆರೋಗ್ಯ ಸಚಿವಾಲಯವೂ ಅಫ್ಘಾನಿಸ್ತಾನದಿಂದ ಭಾರತಕ್ಕೆ ಸ್ಥಳಾಂತರಗೊಂಡವರಿಗೆ ಕನಿಷ್ಠ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯವಾಗಿ ಜಾರಿಗೊಳಿಸಲು ಆದೇಶಿಸಿದೆ.

ಅಫ್ಘಾನಿಸ್ತಾನದಿಂದ ಭಾರತಕ್ಕೆ ಜನರನ್ನು ತುರ್ತು ಸ್ಥಳಾಂತರಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುತ್ತಿದ್ದು ಕಾಬೂಲ್ ದೇಶದಿಂದ ಸ್ಥಳಾಂತರಗೊಂಡ ಜನರಿಗೆ ಕಡ್ಡಾಯ ಪೂರ್ವ ಬೋರ್ಡಿಂಗ್ ಆರ್ ಟಿ-ಪಿಸಿಟಿಆರ್ ಪರೀಕ್ಷೆಯಿಂದ ವಿನಾಯಿತಿ ನೀಡಲು ಈಗಾಗಲೇ ಅನುಮತಿ ನೀಡಿದೆ ಎಂದು ಸಚಿವಾಲಯ ಹೇಳಿದೆ.

ಈ ಮಾರ್ಗಸೂಚಿಯು ಅಫ್ಘಾನಿಸ್ತಾನದಿಂದ ಭಾರತಕ್ಕೆ ಆಗಮಿಸುವವರು ಛಾವ್ಲಾ ಕ್ಯಾಂಪ್‌ಗೆ ಆಗಮಿಸಿದ ದಿನದಿಂದ ಕನಿಷ್ಠ 14 ದಿನಗಳವರೆಗೆ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಲು ಕಡ್ಡಾಯಗೊಳಿಸುತ್ತದೆ.ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ನಾಗರಿಕ ವಿಮಾನಯಾನ ಸಚಿವಾಲಯವು ಪ್ರಯಾಣಿಕರ ಮ್ಯಾನಿಫೆಸ್ಟ್ ಜೊತೆಗೆ ಈ ಒಳಬರುವ ವಿಮಾನಗಳ ನಿಖರ ದಿನಾಂಕ ಮತ್ತು ಸಮಯದ ಬಗ್ಗೆ ಐಟಿಬಿಪಿಗೆ ಸಾಕಷ್ಟು ಮುಂಚಿತವಾಗಿ ತಿಳಿಸುತ್ತವೆ. ಸದರಿ ಮಾಹಿತಿಯನ್ನು ದೆಹಲಿ ಎನ್ ಸಿಟಿ ಸರ್ಕಾರಕ್ಕೂ ಒದಗಿಸಬಹುದು ಎಂದು ಹೇಳಿದೆ.

ವಿಮಾನ ನಿಲ್ದಾಣದಿಂದ ನಜಾಫ್ ಘರ್ ನ ಚಾವ್ಲಾ ಶಿಬಿರಕ್ಕೆ ಪ್ರಯಾಣಿಕರನ್ನು ಸಾಗಿಸಲು ಐಟಿಬಿಪಿ ಅಗತ್ಯ ವ್ಯವಸ್ಥೆ ಮಾಡುತ್ತದೆ. ಪರೀಕ್ಷೆ ವೇಳೆ ಪಾಸಿಟಿವ್ ತಗುಲಿರುವುದು ಧೃಡವಾದರೆ ಕೋವಿಡ್ ಕೇರ್ ಸೆಂಟರ್ ಅಥವಾ ದೆಹಲಿಯ ಎನ್ ಸಿಟಿಯ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಬೇಕು ಎಂದು ಕೇಂದ್ರ ಸಚಿವಾಲಯ ತಿಳಿಸಿದೆ.

- Advertisement -
spot_img

Latest News

error: Content is protected !!