Friday, August 28, 2026
Homeತಾಜಾ ಸುದ್ದಿಮಂಗಳೂರು: ರಸ್ತೆ ಸುರಕ್ಷತೆ ಬಗ್ಗೆ ಪ್ರತೀ ತಿಂಗಳು ಕಡ್ಡಾಯವಾಗಿ ಸಭೆ ನಡೆಸಬೇಕು: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ....

ಮಂಗಳೂರು: ರಸ್ತೆ ಸುರಕ್ಷತೆ ಬಗ್ಗೆ ಪ್ರತೀ ತಿಂಗಳು ಕಡ್ಡಾಯವಾಗಿ ಸಭೆ ನಡೆಸಬೇಕು: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚನೆ

- Advertisement -
- Advertisement -

ಮಂಗಳೂರು: ಜಿಲ್ಲಾ ಮಟ್ಟದ ರಸ್ತೆ ಸುರಕ್ಷತೆ ಬಗ್ಗೆ ಪ್ರತೀ ತಿಂಗಳು ಕಡ್ಡಾಯವಾಗಿ ಸಭೆ ನಡೆಸಬೇಕು, ಅದಕ್ಕೆ ಒಬ್ಬರು ನೋಡಲ್ ಅಧಿಕಾರಿಯನ್ನು ನಿಯೋಜಿಸಿ, ಸಭೆಯಲ್ಲಿ ಚರ್ಚೆಯಾದ ಹಾಗೂ ಕೈಗೊಂಡ ನಿರ್ಣಯಗಳ ಬಗ್ಗೆ 48 ತಾಸಿನೊಳಗೆ ವೆಬ್‌ಸೈಟ್‌ನಲ್ಲಿ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿ.ರಾಜೇಂದ್ರ ಸೂಚನೆ ನೀಡಿದ್ದಾರೆ..

ಸರ್ಕಿಟ್ ಹೌಸ್‌ನಲ್ಲಿ ಜಿಲ್ಲಾ ಮಟ್ಟದ ರಸ್ತೆ ಸುರಕ್ಷೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಸ್ತೆ ದುರಸ್ತಿ ಇರುವ ಬಗ್ಗೆ ನಿಧಾನವಾಗಿ ಚಲಿಸುವಂತೆ ಸೂಚನ ಫಲಕ ಅಳವಡಿಸಬೇಕು. ಗಂಭೀರ ಸ್ವರೂಪದ ಅಪಘಾತವಾಗಿ ಸಾವು ಸಂಭವಿಸಿದ ಸಂದರ್ಭಗಳಲ್ಲಿ ಆಡಿಟ್ ವರದಿ ನೀಡಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

Latest News

error: Content is protected !!