Wednesday, June 24, 2026
Homeತಾಜಾ ಸುದ್ದಿಸ್ಯಾಂಡಲ್ ವುಡ್ ಹಿರಿಯ ನಟ ಮನ್ ದೀಪ್ ರಾಯ್ಗೆ ಹೃದಯಾಘಾತ: ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಶಿಫ್ಟ್

ಸ್ಯಾಂಡಲ್ ವುಡ್ ಹಿರಿಯ ನಟ ಮನ್ ದೀಪ್ ರಾಯ್ಗೆ ಹೃದಯಾಘಾತ: ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಶಿಫ್ಟ್

- Advertisement -
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಮನ್ ದೀಪ್ ರಾಯ್ಗೆ ಹೃದಯಾಘಾತವಾಗಿದೆ. ಮೊದಲು ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ನಟ ‘ಮನದೀಪ್ ರಾಯ್’ ಗೆ ಮೂರು ದಿನದ ಹಿಂದೆ ಹಾರ್ಟ್ ಅಟ್ಯಾಕ್ ಆಗಿತ್ತು,. ಅಲ್ಲದೇ ಅವರು ಕ್ಯಾನ್ಸರ್ ನಿಂದ ಕೂಡ ಬಳಲುತ್ತಿದ್ದು, ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ. ಹಾಗಾಗಿ ಜಯದೇವ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ಹೃದ್ರೋಗ ತಜ್ಞ ವೈದ್ಯ ಡಾ.ಮಂಜುನಾಥ್ ಹೇಳಿದ್ದಾರೆ. ಮೂರು ದಿನಗಳ ಹಿಂದೆ ಮನದೀಪ್ ರಾಯ್ ಗೆ ಹಾರ್ಟ್ ಅಟ್ಯಾಕ್ ಆಗಿದ್ದು, . ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

ಅಂದಹಾಗೆ ಮಂದೀಪ್ ರೈ ಕನ್ನಡದ ಸುಮಾರು 500 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದರು. ಹಾಸ್ಯ ನಟನಾಗಿ ಕನ್ನಡ ಸಿನಿಮಾ ಲೋಕದಲ್ಲಿ ಮಿಂಚಿದ್ದ ನಟ ಇಂದು ಹಾಸಿಗೆ ಹಿಡಿದಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

- Advertisement -

Latest News

error: Content is protected !!