Tuesday, June 18, 2024
Homeತಾಜಾ ಸುದ್ದಿಮಾಜಿ ಸಂಸದ, ಕಾವೇರಿ ಹೋರಾಟಗಾರ ಜಿ.ಮಾದೇಗೌಡ ವಿಧಿವಶ

ಮಾಜಿ ಸಂಸದ, ಕಾವೇರಿ ಹೋರಾಟಗಾರ ಜಿ.ಮಾದೇಗೌಡ ವಿಧಿವಶ

spot_img
- Advertisement -
- Advertisement -

ಮಂಡ್ಯ: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಂಸದ ಜಿ.ಮಾದೇಗೌಡ (92) ಅವರು ಇಂದು ನಿಧನರಾಗಿದ್ದಾರೆ
ಜಿ.ಮಾದೇಗೌಡ ಅವರು ಕೆ,ಎಂ ದೊಡ್ಡಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೆಲವು ದಿನಗಳ ಹಿಂದೆ ಶ್ವಾಸಕೋಶದಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಆರೋಗ್ಯ ಸುಧಾರಿಸದ ಹಿನ್ನೆಲೆ ಮದ್ದೂರಿನ ಭಾರತೀನಗರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಅವರು ಮೃತಪಟ್ಟಿದ್ದಾರೆ.

ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರಾಗಿದ್ದ ಮಾದೇಗೌಡರು ಶಾಸಕರಾಗಿ, ಸಂಸದರಾಗಿಯೂ ಕಾರ್ಯನಿರ್ವಹಿಸಿದ್ದರು. ಕಾವೇರಿ ನದಿ ನೀರಿನ ಹೋರಾಟಗಳ ರೂವಾರಿಯಾಗಿದ್ದ ಅವರು, ನೀರು ಬಿಡುವ ವಿಚಾರದಲ್ಲಿ ಸರ್ಕಾರದ ನಿಲುವು ವಿರೋಧಿಸಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಗೆ ಎಲ್ಲಾ ಪಕ್ಷಗಳಲ್ಲೂ ಆತ್ಮೀಯರಿದ್ದರು. ಪಕ್ಷಾತೀತ ಜನಾನುರಾಗಿ ನಾಯಕರಾಗಿದ್ದರು.

1980ರ ದಶಕದಲ್ಲಿ ಆರ್​ ಗುಂಡೂರಾವ್​ ಅವರ ಮಂತ್ರಿ ಮಂಡಲದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದ ಮಾದೇಗೌಡರು ಮಂಡ್ಯದ ಅಂದಿನ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ 1989 ಮತ್ತು 1991ರಲ್ಲಿ ಆಯ್ಕೆಗೊಂಡಿದ್ದರು.

- Advertisement -
spot_img

Latest News

error: Content is protected !!