Saturday, June 27, 2026
Homeಕರಾವಳಿಮಂಗಳೂರು: ಹೊತ್ತಿ ಉರಿದ ಕಾರು- ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ

ಮಂಗಳೂರು: ಹೊತ್ತಿ ಉರಿದ ಕಾರು- ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ

- Advertisement -
- Advertisement -

ಮಂಗಳೂರು: ಇಲ್ಲಿನ ಹಳೆಯಂಗಡಿಯ ರಾಷ್ಟ್ರೀಯ ಹೆದ್ದಾರಿ ಕೊಲ್ನಾಡು ಸಮೀಪ ರಾತ್ರಿವೇಳೆ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಚಾಲಕ ತಮ್ಮ ಸಮಯ ಪ್ರಜ್ಞೆಯಿಂದ ಅಪಾಯದಿಂದ ಪಾರಾಗಿದ್ದಾನೆ.

ಕಾರು ಉರಿಯುವುದನ್ನು ಕಂಡ ಚಾಲಕ ಬದಿಗೆ ನಿಲ್ಲಿಸಿ ತಕ್ಷಣ ಕಾರಿನಿಂದ ಹೊರ ಬಂದಿದ್ದಾರೆ. ನೋಡು ನೋಡುತ್ತಿದ್ದಂತೆ ಕಾರು ಸಂಪೂರ್ಣ ಹೊತ್ತಿ ಉರಿಯಲಾರಂಭಿಸಿದೆ. ಕೆಲ ಹೊತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಗೊಂಡಿತ್ತು. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಸ್ಥಳೀಯರ ಸಹಾಯದೊಡನೆ ಬೆಂಕಿ ನಂದಿಸಿದ್ದಾರೆ.

- Advertisement -

Latest News

error: Content is protected !!