Tuesday, July 14, 2026
Homeಕರಾವಳಿಮಂಗಳೂರುಮಂಗಳೂರು; ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು ಇದ್ದಕ್ಕಿದ್ದಂತೆ ಬೆಂಕಿಗಾಹುತಿ

ಮಂಗಳೂರು; ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರು ಇದ್ದಕ್ಕಿದ್ದಂತೆ ಬೆಂಕಿಗಾಹುತಿ

- Advertisement -
- Advertisement -

ಮಂಗಳೂರು; ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಇದ್ದಕ್ಕಿದ್ದಂತೆ ಬೆಂಕಿಗಾಹುತಿಯಾದ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಇಂದು ಬೆಳಗ್ಗೆ ನಡೆದಿದೆ.

ಸುಟ್ಟು ಕರಕಲಾದ ಕಾರು ಬೆನ್ಸ್ ಕಂಪೆನಿಯ ಕಾರೆಂದು ಹೇಳಲಾಗುತ್ತಿದ್ದು, ಕಾರು ಉಡುಪಿಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ.ಎನ್ ಐಟಿಕೆ ಬಳಿ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ . ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.

ಮಂಗಳೂರು ಉತ್ತರ ಸಂಚಾರ ಪೊಲೀಸರು, ಸುರತ್ಕಲ್ ಠಾಣೆಯ ಪೊಲಿಸರು ಸ್ಥಳಕ್ಕೆ ದೌಡಾಯಿಸಿದ್ದು, ಕದ್ರಿ ಅಗ್ನಿಶಾಮಕ ದಳದ ಕರೆ ಮಾಡಿದಾಗ, ತ್ವರಿತಗತಿಯಲ್ಲಿ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗು ಅಧಿಕಾರಿಗಳು ಬೆಂಕಿ ನಂದಿಸಲು ಯತ್ನಿಸಿದರೂ ಅಷ್ಟರಲ್ಲಿ ಕಾರು ಬೆಂಕಿಗಾಹುತಿಯಾಗಿತ್ತು.

- Advertisement -

Latest News

error: Content is protected !!