Thursday, June 25, 2026
Homeಕರಾವಳಿಮಂಗಳೂರುಮಂಗಳೂರು; ಸಮುದ್ರಪಾಲಾಗುತ್ತಿದ್ದ ಸಹೋದರನ ಪುತ್ರಿಯನ್ನು ರಕ್ಷಿಸಲು ಹೋಗಿ ತಾನು ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

ಮಂಗಳೂರು; ಸಮುದ್ರಪಾಲಾಗುತ್ತಿದ್ದ ಸಹೋದರನ ಪುತ್ರಿಯನ್ನು ರಕ್ಷಿಸಲು ಹೋಗಿ ತಾನು ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

- Advertisement -
- Advertisement -

ಮಂಗಳೂರು; ಸಮುದ್ರಪಾಲಾಗುತ್ತಿದ್ದ ಸಹೋದರನ ಪುತ್ರಿಯನ್ನು ರಕ್ಷಿಸಲು ಹೋಗಿ ವ್ಯಕ್ತಿ ತಾನು ನೀರುಪಾಲಾದ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ.

ಬೆಂಗಳೂರು ಶಿವಾಜಿನಗರದ ಎಚ್.ಪಿ.ಕೆ ರೋಡ್ ನಿವಾಸಿ ದಿ.ಖಝೂಮ್ ಅಬ್ದುಲ್ ಶೈಖ್ ಎಂಬವರ ಪುತ್ರ ಕೆ.ಎಮ್. ಸಾಜಿದ್ ಆಲಿ (45) ಮೃತ ದುರ್ದೈವಿ. ಹಿರಿಯ ಸಹೋದರನ ಪುತ್ರಿ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ನಡುವೆ ಸಿಲುಕಿದ್ದನ್ನು ನೋಡಿ ಸಾಜಿದ್ ಆಲಿ ರಕ್ಷಿಸಿದ್ದಾರೆ, ಆದರೆ ಆ ವೇಳೆ  ತಾವೇ ಅಲೆಗಳ ನಡುವೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾರೆ. ನೀರಿನಲ್ಲಿ ಮುಳುಗಿ ವಾಪಸ್‌ ದಡಕ್ಕೆ ಬಂದವರನ್ನು ತಕ್ಷಣ ದೇರಳಕಟ್ಟೆ ಆಸ್ಪತ್ರೆಗೆ ಕೊಡೊಯ್ಯಲಾಗಿದೆ ಅಷ್ಟರಲ್ಲಿ ಅವರು, ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಸಾಜಿಲ್ ಅಲಿ ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದವರು. ಪಡೀಲ್ ನಲ್ಲಿ ನಡೆದಿದ್ದ ಸಂಬಂಧಿಕರ ಮದುವೆ ಸಮಾರಂಭದಲ್ಲಿ ಭಾಗವಹಿಸಿ 11 ಮಂದಿ ಕುಟುಂಬಿಕರು ಸೋಮೇಶ್ವರ ಸಮುದ್ರ ತೀರದಲ್ಲಿ ವಿಹಾರಕ್ಕೆಂದು ಆಗಮಿಸಿದ್ದರು. 2015ರಲ್ಲಿ ಪುತ್ತೂರು ನಿವಾಸಿ ಆಲಿಮಾ ರಶೀದಾ ಎಂಬವರನ್ನು ವಿವಾಹವಾಗಿದ್ದರು. ಬೆಂಗಳೂರಿನಲ್ಲೆ ನೆಲೆಸಿದ್ದ ಕುಟುಂಬ ಕಳೆದ ನಾಲ್ಕು ವರ್ಷಗಳಿಂದ ಪುತ್ತೂರಿನ ಬನ್ನೂರು ಬಾಡಿಗೆ ಫ್ಲ್ಯಾಟ್ ನಲ್ಲಿ ನೆಲೆಸಿದ್ದರು. ಸಜ್ಜದ್ ಆಲಿ ವಾರಕ್ಕೊಮ್ಮೆ ಊರಿಗೆ ಬರುತ್ತಿದ್ದರು. ಡಿ.29 ರಂದು ಸಜ್ಜದ್ ಆಲಿ ಪುತ್ತೂರಿಗೆ ಸಹೋದರರು ಹಾಗೂ ಕುಟುಂಬಿಕರ ಜತೆಗೆ ಮದುವೆ ಸಮಾರಂಭಕ್ಕೆಂದು ಬಂದಿದ್ದರು. 

- Advertisement -

Latest News

error: Content is protected !!