Saturday, June 6, 2026
Homeಕರಾವಳಿಮಂಗಳೂರುಮಂಗಳೂರು; ನಿಲ್ಲಿಸಿದ್ದ ಬೈಕ್ ಗೆ ವಾಹನವೊಂದು ಡಿಕ್ಕಿ ಹೊಡೆದು ಯುವಕ ಸಾವು

ಮಂಗಳೂರು; ನಿಲ್ಲಿಸಿದ್ದ ಬೈಕ್ ಗೆ ವಾಹನವೊಂದು ಡಿಕ್ಕಿ ಹೊಡೆದು ಯುವಕ ಸಾವು

- Advertisement -
- Advertisement -

ಮಂಗಳೂರು; ನಿಲ್ಲಿಸಿದ್ದ ಬೈಕ್ ಗೆ ವಾಹನವೊಂದು ಡಿಕ್ಕಿ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ಸುರತ್ಕಲ್ ಮುಕ್ಕ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಹಳೆಯಂಗಡಿ ಇಂದಿರಾನಗರ ನಿವಾಸಿ ಗಣೇಶ ದೇವಾಡಿಗ (27) ಮೃತ ಯುವಕ.

ಗಣೇಶ ಅವರು ಪಣಂಬೂರು ಬಂದರ್ ನಲ್ಲಿ ಉದ್ಯೋಗದಲ್ಲಿದ್ದು, ಬೆಳಗ್ಗೆ 7ಗಂಟೆಯ ಸುಮಾರಿಗೆ ಕೆಲಸಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಮುಕ್ಕ ಜಂಕ್ಷನ್ ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ನಿಧಾನಿಸಿದಾಗ ಹಿಂದಿನಿಂದ  ವೇಗವಾಗಿ ಬಂದ ವಾಹನ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು ಎನ್ನಲಾಗಿದೆ. ತಕ್ಷಣವೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆ ದಾಖಲಿಸಿದ್ದು, ಅವರು ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ .

ಮಂಗಳೂರು ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!