Wednesday, June 10, 2026
Homeಕರಾವಳಿಮಂಗಳೂರುಮಂಗಳೂರು :ಎನ್‌ಡಿಪಿಎಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು :ಎನ್‌ಡಿಪಿಎಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು : ಎನ್‌ಡಿಪಿಎಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಉಪ್ಪಳದ ಪಚ್ಚಿಲಾಂಬರ್ ನಿವಾಸಿ ಫಜಲ್ (31) ಬಂಧಿತ ಆರೋಪಿ.

ಆರೋಪಿ 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರೂ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ಆತನ ವಿರುದ್ಧ ಕ್ರಮ ಕೈಗೊಂಡಿದ್ದರು.

ಜೂನ್ 9, 2026ರಂದು ಉಪ್ಪಳದಲ್ಲಿರುವ ಆರೋಪಿಯ ಮನೆಯಿಂದ ಆತನನ್ನು ಬಂಧಿಸಿದ ಪೊಲೀಸರು, ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ, ಮಂಗಳೂರು (ಸ್ಪೆಷಲ್ ಕೇಸ್ ನಂ. 23/2026)ಕ್ಕೆ ಹಾಜರುಪಡಿಸಿದ್ದಾರೆ.ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!