- Advertisement -


- Advertisement -
ಮಂಗಳೂರು: ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಓಡಿಸುತ್ತಿದ್ದ ಪತಿ ಸ್ಥಳದಲ್ಲೇ ಮೃತಪಟ್ಟು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿನ ಎಕ್ಕಾರು ಬಳಿ ಸೋಮವಾರ ಸಂಜೆ ನಡೆದಿದೆ.
ಬಜ್ಪೆ ನಿವಾಸಿ ಬಶೀರ್ ಕಿನ್ನಿಗೋಳಿ (45) ಮೃತಪಟ್ಟವರು. ಗಾಯಗೊಂಡಿರುವ ಅವರ ಪತ್ನಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ದಂಪತಿ ಮುಲ್ಕಿಯ ಕೊಲ್ನಾಡಿನಲ್ಲಿ ಖಾಸಗಿ ಸಮಾರಂಭ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಖಾಸಗಿ ಸರ್ವಿಸ್ ಬಸ್ ಢಿಕ್ಕಿಯಾಗಿದೆ.ಅಪಘಾತದ ತೀವ್ರತೆಗೆ ಬಶೀರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
- Advertisement -


