Sunday, June 7, 2026
Homeಕರಾವಳಿಮಂಗಳೂರು; ಇನ್ಸ್ಟಾಗ್ರಾಂನಲ್ಲಿ  ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಕಮೆಂಟ್ ಮಾಡಿದವನ ಬಂಧನ

ಮಂಗಳೂರು; ಇನ್ಸ್ಟಾಗ್ರಾಂನಲ್ಲಿ  ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಕಮೆಂಟ್ ಮಾಡಿದವನ ಬಂಧನ

- Advertisement -
- Advertisement -

ಮಂಗಳೂರು; ಇನ್ಸ್ಟಾಗ್ರಾಂನಲ್ಲಿ  ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಕಮೆಂಟ್ ಮಾಡಿದವನನ್ನು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಿಕರ್ನಕಟ್ಟೆಯ ಹಿಲ್‌ರೋಡ್ ನಿವಾಸಿ ಸಲ್ಮಾನ್ (22) ಬಂಧಿತ ಆರೋಪಿ.

ಹಿಂದೂ ದೇವರ ಬಗ್ಗೆ ಅಶ್ಲೀಲವಾಗಿ ಬರೆದು ಕಮೆಂಟ್ ಮಾಡಿದ ಬಗ್ಗೆ ಮಂಗಳೂರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.ಈ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 7ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನಗರ ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್‌ರ ಮಾರ್ಗದರ್ಶನದಂತೆ ನಗರ ಸೆನ್ ಕ್ರೈಂ ಪೊಲೀಸ್ ಠಾಣಾ ಇನ್‌ಸ್ಪೆಕ್ಟರ್ ಸತೀಶ್ ಎಂಪಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

- Advertisement -

Latest News

error: Content is protected !!