Thursday, June 25, 2026
Homeಕರಾವಳಿಉಡುಪಿಮಂಗಳೂರು; ಲೋಕಾಯುಕ್ತ ಬಲೆಗೆ ಬಿದ್ದ ಲೋಕೋಪಯೋಗಿ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ

ಮಂಗಳೂರು; ಲೋಕಾಯುಕ್ತ ಬಲೆಗೆ ಬಿದ್ದ ಲೋಕೋಪಯೋಗಿ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ

- Advertisement -
- Advertisement -

ಮಂಗಳೂರು: ಲೋಕೋಪಯೋಗಿ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸಂಪತ್, ಎಸ್.ಡಿ.ಎ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ ಮಂಗಳೂರು ಲೋಕಾಯುಕ್ತ ಬಲೆಗೆ ಬಿದ್ದವರು.

ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಇಲೆಕ್ಟ್ರಿಕಲ್ ಪ್ರಥಮ ದರ್ಜೆಯ ಗುತ್ತಿಗೆದಾರರಾಗಿ ಕೆಲಸ ಮಾಡಿಕೊಂಡಿರುವ ದೂರುದಾರರು  2025 ರ ಸಾಲಿನಲ್ಲಿ ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಿಗೆ ಒಳಪಟ್ಟ ದಾರಿ ದೀಪ ವಿಸ್ತರಣೆಯ ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸಿದ್ದು, ಆ ಕೆಲಸದ ಬಿಲ್‌ಗೆ 4 ಪರ್ಸೆಂಟ್‌ನಂತೆ ಒಟ್ಟು ರೂ 22,600/- ಕೊಡಬೇಕು ಎಂಬುದಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ, ವಿದ್ಯುತ್ ಉಪವಿಭಾಗ, ಲೋಕೋಪಯೋಗಿ ಇಲಾಖೆ, ಮಂಗಳೂರು ಇಲ್ಲಿನ ಎಸ್.ಡಿ.ಎ ಸಂಪತ್ ರವರು ದೂರುದಾರರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಸಂಪತ್, ಎಸ್.ಡಿ.ಎ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ, ವಿದ್ಯುತ್ ಉಪವಿಭಾಗ, ಲೋಕೋಪಯೋಗಿ ಇಲಾಖೆ, ಮಂಗಳೂರು ರವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಅದರಂತೆ  ದಿನಾಂಕ 02.03.2026 ರಂದು ಸಂಪತ್, ಎಸ್.ಡಿ.ಎ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ, ವಿದ್ಯುತ್ ಉಪವಿಭಾಗ, ಲೋಕೋಪಯೋಗಿ ಇಲಾಖೆ, ಮಂಗಳೂರು ರವರು ದೂರುದಾರರಿಂದ ರೂ. 22,600/- (ಇಪ್ಪತ್ತೆರಡು ಸಾವಿರದ ಆರು ನೂರು), ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಸಂಪತ್ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.

ಈ ಕಾರ್ಯಾಚರಣೆಯನ್ನು ಶ್ರೀ ಬಿ.ಪಿ ದಿನೇಶ್ ಕುಮಾರ್, ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ ರವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಸುರೇಶ್ ಕುಮಾರ್.ಪಿ, ಡಾ. ಗಾನ ಪಿ ಕುಮಾರ್, ಪಿ.ಐ ಶ್ರೀಮತಿ ಭಾರತಿ ಜಿ, ರವರ ಉಸ್ತುವಾರಿಯಲ್ಲಿ ಪೊಲೀಸ್ ನಿರೀಕ್ಷಕರಾದ ಶ್ರೀ ಚಂದ್ರಶೇಖರ್ ಕೆ.ಎನ್. ರವರು ಸಿಬ್ಬಂದಿಗಳಾದ ರಾಜಪ್ಪ, ಮಹೇಶ್, ಆದರ್ಶ್, ರಾಮ ನಾಯ್ಕ, ಗಂಗಣ್ಣ, ಮಹಾದೇವ, ಪವಿತ್ರ, ಲಕ್ಷ್ಮೀ, ರವಿ ಪವಾರ್, ನವೀನ್ ರವರ ಜೊತೆ ನಡೆಸಿರುತ್ತಾರೆ.

- Advertisement -

Latest News

error: Content is protected !!