Sunday, June 29, 2025
Homeಕರಾವಳಿಲಂಚ ಸ್ವೀಕಾರ ಆರೋಪ ಸಾಬೀತು: ಮಂಗಳೂರು ವಿವಿಯ ಸಹಾಯಕ ಪ್ರೊಫೆಸರ್ ಗೆ 5 ವರ್ಷ ಶಿಕ್ಷೆ

ಲಂಚ ಸ್ವೀಕಾರ ಆರೋಪ ಸಾಬೀತು: ಮಂಗಳೂರು ವಿವಿಯ ಸಹಾಯಕ ಪ್ರೊಫೆಸರ್ ಗೆ 5 ವರ್ಷ ಶಿಕ್ಷೆ

spot_img
- Advertisement -
- Advertisement -

ಮಂಗಳೂರು: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೊಣಾಜೆ ಮಂಗಳೂರು ಯುನಿವರ್ಸಿಟಿಯ ಸಮಾಜ ಶಾಸ್ತ್ರದ ಸಹಾಯಕ ಪ್ರೊಫೆಸರ್ ಆಗಿರುವ ಡಾ. ಅನಿತಾ ರವಿಶಂಕರ್ ಈಗ ಜೈಲು ಹಕ್ಕಿಯಾಗಿದ್ದಾರೆ. ಲಂಚ ಸ್ವೀಕಾರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಾ. ಅನಿತಾ ರವಿಶಂಕರ್ ಗೆ 5ವರ್ಷ ಸಜೆ ವಿಧಿಸಿ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ. ಬಿ. ಜಕಾತಿ ಅವರು ತೀರ್ಪು ನೀಡಿದ್ದಾರೆ.

ಏನಿದು ಪ್ರಕರಣ:
ದಿನಾಂಕ 04-12-2012ರಂದು ಪಿ.ಹೆಚ್.ಡಿ. ವಿದ್ಯಾರ್ಥಿನಿ ಪ್ರೇಮ ಡಿ’ಸೋಜ ಎಂಬವರಿಂದ ಅವರ ಪ್ರಭಂದ ಅಂಗೀಕಾರ ಆಗಬೇಕಾದರೆ ಮೈಸೂರಿನಿಂದ ಬರುವ ಬಾಹ್ಯ ಪರಿವೀಕ್ಷಕರ ಖರ್ಚಿನ ಬಾಬ್ತು ರೂ. 16,800/- ಲಂಚದ ಹಣಕ್ಕೆ ಬೇಡಿಕೆ ಇಟ್ಟು ಮುಂಗಡ ಹಣ ರೂ. 5,000/- ಸ್ವೀಕರಿಸುತ್ತಿದ್ದಾಗ ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ಉಮೇಶ್ ಜಿ. ಶೇಟ್ ಮತ್ತು ಸಿಬ್ಬಂದಿ ದಾಳಿ ಮಾಡಿ ಪ್ರಸ್ತುತ ಕೊಣಾಜೆ ಮಂಗಳೂರು ಯುನಿವರ್ಸಿಟಿಯ ಸಮಾಜ ಶಾಸ್ತ್ರದ ಸಹಾಯಕ ಪ್ರೊಫೆಸರ್ ಆಗಿರುವ ಡಾ. ಅನಿತಾ ರವಿಶಂಕರ್ ರವರನ್ನು ಬಂದಿಸಿದ್ದರು.

ಡಾ. ಅನಿತಾ ರವಿಶಂಕರ್ ಅವರು ಮೊದಲು ರೂ. 10,000/-, ನಂತರ ರೂ 4,000/- ಮತ್ತು ತದನಂತರ ರೂ. 16,800/- ಕ್ಕೆ ವಿದ್ಯಾರ್ಥಿನಿ ಪ್ರೇಮ ಡಿ’ಸೋಜ ಬಳಿ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು. ಲೋಕಾಯುಕ್ತ ಸಂಸ್ಥೆಯ ಪರವಾಗಿ ಒಟ್ಟು 9 ಸಾಕ್ಷಿದಾರರನ್ನು ನ್ಯಾಯಾಲಯದಲ್ಲಿ ಸಾಕ್ಷಿ ವಿಚಾರಣೆಗೆ ಒಳ ಪಡಿಸಲಾಗಿತ್ತು. ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್. ಎನ್. ರಾಜೇಶ್ ರವರ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪ ಸಾಭೀತಾಗಿದೆ ಎಂದು ತೀರ್ಮಾನಕ್ಕೆ ಬಂದ ಹಿನ್ನಲೆಯಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿದೆ. ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ. ಬಿ. ಜಕಾತಿ ಅವರು ಶಿಕ್ಷೆ ಪ್ರಕಟಿಸಿದ್ದಾರೆ.

ಭ್ರಷ್ಟಾಚಾರ ನಿಗ್ರಹ ಖಾಯಿದೆಯ ಕಲಂ 7 ರ ಅಡಿ ಯಲ್ಲಿ ಎಸಗಿದ ಅಪರಾಧಕ್ಕೆ ಆರೋಪಿಗೆ 2 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ. ಕಲಂ 13 (1) (ಡಿ) ಯಲ್ಲಿ ಎಸಗಿದ ಅಪರಾಧಕ್ಕೆ 3 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ.ಆರೋಪಿ ದಂಡ ತೆರಲು ತಪ್ಪಿದಲ್ಲಿ ತಲಾ ಒಂದು ತಿಂಗಳುಗಳ ಸಾದಾ ಸಜೆ ಅನುಭವಿಸಬೇಕೆಂದು ದಿನಾಂಕ 09-07-2021 ರಂದು ನ್ಯಾಯಾಲಯ ಆದೇಶಿಸಿದೆ. ಆದರೆ ಎರಡೂ ಅಪರಾಧಕ್ಕೆ ಸಂಬಂದಿಸಿದ ಶಿಕ್ಷೆಗಳನ್ನು ಅಪರಾಧಿ ಜೊತೆಯಾಗಿ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ. ಆಗಿನ ಲೋಕಾಯುಕ್ತ ಇನ್ಸ್ಪೆಕ್ಟರ್ ಉಮೇಶ್ ಜಿ. ಶೇಟ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಮಂಗಳೂರು ಲೋಕಾಯುಕ್ತ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ, ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ವಾದಿಸಿದ್ದರು.

- Advertisement -
spot_img

Latest News

error: Content is protected !!