- Advertisement -
- Advertisement -
ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಕರ್ನಾಟಕ ಸರ್ಕಾರದ ಅಧೀನದ ಮೌಲಾನ ಅಝಾದ್ ಅಲ್ಪಸಂಖ್ಯಾತರ ಭವನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.

ನಿನ್ನೆ ತಡರಾತ್ರಿ ಈ ವಿಧ್ವಂಸಕರ ಘಟನೆ ನಡೆದಿದ್ದು, ಸುಮಾರು ನಾಲ್ಕೈದು ಜನರಿಂದ ಕಲ್ಲು ತೂರಾಟ ನಡೆಸಲಾಗಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. .

ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ಭೇಟಿ ನೀಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಘಟನಾ ಸ್ಥಳದಲ್ಲಿ ಒಂದು ಕೆ.ಎಸ್.ಆರ್.ಪಿ ತುಕಡಿಯನ್ನು ನಿಯೋಜಿಸಲಾಗಿದೆ.
ಅಪರಾಧಿಗಳ ಬಂಧನಕ್ಕೆ ಅಲ್ಪಸಂಖ್ಯಾತರ ಭವನದ ಸಿಸಿಟಿವಿ ಪರಿಶೀಲನೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿಯನ್ನು ನೀರಿಕ್ಷಿಸಲಾಗಿದೆ.
- Advertisement -