Monday, May 20, 2024
Homeಕರಾವಳಿರೈಲ್ವೇ ಪ್ರಯಾಣಿಕರ ಗಮನಕ್ಕೆ, ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು

ರೈಲ್ವೇ ಪ್ರಯಾಣಿಕರ ಗಮನಕ್ಕೆ, ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು

spot_img
- Advertisement -
- Advertisement -

ಮಂಗಳೂರು-ಬೆಂಗಳೂರು ರೈಲು ಸಂಚಾರಗಳನ್ನು ರದ್ದುಗೊಳಿಸಲಾಗಿದೆ. ಹುಬ್ಬಳ್ಳಿ ನೈಋತ್ಯ ರೈಲ್ವೆ ವಲಯ ಪಡೀಲ್ ಮತ್ತು ಕುಲಶೇಖರ ನಿಲ್ದಾಣಗಳ ನಡುವೆ ಜೋಡು ಮಾರ್ಗ ಕಾಮಗಾರಿ ಕಾರಣದಿಂದಾಗಿ ಮಾ.17ರಿಂದ ಮಾ.20ರವರೆಗೆ ಕೆಲವು ರೈಲುಗಳ ಸೇವೆಯನ್ನು ರದ್ದುಗೊಳಿಸಲಾಗಿದೆ.

ಸುಬ್ರಹ್ಮಣ್ಯ ರಸ್ತೆ ನಿಲ್ದಾಣದಿಂದ ಆರಂಭವಾಗುವ ರೈಲು ಸಂಖ್ಯೆ 06488 ಸುಬ್ರಹ್ಮಣ್ಯ ರೋಡ್ – ಮಂಗಳೂರು ಸೆಂಟ್ರಲ್ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲಿನ ಸೇವೆಯನ್ನು ರದ್ದುಗೊಳಿಸಲಾಗಿದೆ.

ಕಬಕ ಪುತ್ತೂರು ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 06486 ಕಬಕ ಪುತ್ತೂರು – ಮಂಗಳೂರು ಸೆಂಟ್ರಲ್ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲಿನ ಸೇವೆಯನ್ನು ರದ್ದು ಮಾಡಲಾಗಿದೆ.

ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಶುರುವಾಗುವ ರೈಲು ಸಂಖ್ಯೆ 06487 ಮಂಗಳೂರು ಸೆಂಟ್ರಲ್ – ಕಬಕ ಪುತ್ತೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲಿನ ಸೇವೆಯನ್ನು ರದ್ದು ಮಾಡಲಾಗಿದೆ.

ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 06489 ಮಂಗಳೂರು ಸೆಂಟ್ರಲ್ – ಸುಬ್ರಹ್ಮಣ್ಯ ರೋಡ್ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲಿನ ಸೇವೆಯನ್ನು ರದ್ದುಗೊಳಿಸಲಾಗುತ್ತದೆ.

ಪುಣೆ ನಿಲ್ದಾಣದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 11097 ಪುಣೆ – ಎರ್ನಾಕುಲಂ ಪೂರ್ಣಾ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಸಂಚರಿಸುವುದಿಲ್ಲ.

- Advertisement -
spot_img

Latest News

error: Content is protected !!