Wednesday, June 3, 2026
Homeಕರಾವಳಿಸುರತ್ಕಲ್:‌ ರಾಷ್ಟ್ರಪತಿಯವರಿಂದ ಪ್ರಶಸ್ತಿ ಸ್ವೀಕರಿಸಲಿರುವ ಬಿಂದಿಯಾ ಶೆಟ್ಟಿ!

ಸುರತ್ಕಲ್:‌ ರಾಷ್ಟ್ರಪತಿಯವರಿಂದ ಪ್ರಶಸ್ತಿ ಸ್ವೀಕರಿಸಲಿರುವ ಬಿಂದಿಯಾ ಶೆಟ್ಟಿ!

- Advertisement -
- Advertisement -

ಸುರತ್ಕಲ್:‌ ಇಲ್ಲಿನ ಗೋವಿಂದ ದಾಸ ಕಾಲೇಜ್‌‌ನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಅವರಿಗೆ ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ(ಎನ್‌ಎಸ್‌ಎಸ್‌) ನೀಡುವ ಅತ್ಯುತ್ತಮ ಪ್ರತಿಭಾನ್ವಿತೆಗಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ನವದೆಹಲಿಯಲ್ಲಿ ಸೆ. 24 ರಂದು ರಾಷ್ಟ್ರಪತಿಯವರಿಂದ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಸುರತ್ಕಲ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.ಈಕೆ ಕಟ್ಲ ಲೀಲಾಧರ ಶೆಟ್ಟಿ ಮತ್ತು ಸುಜಾತ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ. ಈಕೆ ಎಸ್ಎಸ್ಎಲ್‌ಸಿಯಲ್ಲಿ ಹಾಗೂ ಪಿಯುಸಿಯಲ್ಲಿ ರಾಜ್ಯದಲ್ಲೇ ಐದನೇ ಸ್ಥಾನ ಪಡೆದಿದ್ದರು. ಸದ್ಯ ಸಿಎ ವ್ಯಾಸಂಗವನ್ನೂ ಮಾಡುತ್ತಿರುವ ಬಿಂದಿಯಾ ಶೆಟ್ಟಿ ಅನೇಕ ಸಂಘಸಂಸ್ಥೆಗಳಿಂದಲೂ ಪ್ರಶಸ್ತಿ ಗೌರವಗಳನ್ನು ಪಡೆದಿದ್ದರು.

ಈಕೆ 2019 ರಲ್ಲಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೆಡ್ ನಲ್ಲೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು.

- Advertisement -

Latest News

error: Content is protected !!