Monday, June 8, 2026
Homeಕರಾವಳಿಮಂಗಳೂರಿನ ಉದ್ಯಮಿ ಆತ್ಮಹತ್ಯೆಗೆ ಶರಣು!..ಸಾವಿಗೆ ಕಾರಣವಾಯ್ತಾ ಆರ್ಥಿಕ ಮುಗ್ಗಟ್ಟು?

ಮಂಗಳೂರಿನ ಉದ್ಯಮಿ ಆತ್ಮಹತ್ಯೆಗೆ ಶರಣು!..ಸಾವಿಗೆ ಕಾರಣವಾಯ್ತಾ ಆರ್ಥಿಕ ಮುಗ್ಗಟ್ಟು?

- Advertisement -
- Advertisement -

ಮಂಗಳೂರು: ಇಲ್ಲಿನ ಖ್ಯಾತ ಉದ್ಯಮಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ವರದಿಯಾಗಿದೆ.ಗುರುಪುರದ ನಿವಾಸಿ ಉದ್ಯಮಿ ಚಂದ್ರಶೇಖರ್ ಶೆಟ್ಟಿ (38) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದ್ದು ಇವರು ಹಂಪನಕಟ್ಟೆಯಲ್ಲಿ ಕಚೇರಿ ಹೊಂದಿದ್ದರು.ತಮ್ಮ ಕಚೇರಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇವರು ಆತ್ಮಹತ್ಯೆಗೆ ಯತ್ನಿಸಿದ್ದನ್ನು ಗಮನಿಸಿದ ಸ್ಥಳೀಯ ಅಂಗಡಿಯವರು ಆಸ್ಪತ್ರೆಗೆ ಕರೆದೊಯ್ದಿದ್ದಾರಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು. ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆಗೈದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.ಉತ್ತರ (ಬಂದರ್) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!