Thursday, June 25, 2026
Homeಕರಾವಳಿಮಂಗಳೂರು; ಕಾರ್ಮಿಕರ ನಡುವೆ ಹೊಡೆದಾಟ, ಓರ್ವ ಸಾವು

ಮಂಗಳೂರು; ಕಾರ್ಮಿಕರ ನಡುವೆ ಹೊಡೆದಾಟ, ಓರ್ವ ಸಾವು

- Advertisement -
- Advertisement -

ಮಂಗಳೂರು; ಕಾರ್ಮಿಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿ ಮತ್ತಿಬ್ಬರು ಗಾಯಗೊಂಡ ಘಟನೆ  ಸುರತ್ಕಲ್ ನ ಕುಳಾಯಿ ಮಾರ್ಬಲ್‌ ಸಂಸ್ಥೆಯ ಬಳಿ ನಡೆದಿದೆ.

ಬಿಹಾರ ಮೂಲದ ಚೋಟು ಕುಮಾರ್ (21) ಮೃತ ಕಾರ್ಮಿಕ.  ಮೃತ ಛೋಟು ಮತ್ತು ಆರೋಪಿಗಳು ಕುಳಾಯಿಯ ಮಾರ್ಬಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಶನಿವಾರ ರಾತ್ರಿ ಊಟಕ್ಕೆ ಸಂಬಂಧಿಸಿಂತೆ ಮೂವರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಬಳಿಕ ಅದು ಅತಿರೇಕಕ್ಕೆ ಹೋಗಿ ಹೊಡೆದಾಡಿಕೊಂಡಿದ್ದರು ಎನ್ನಲಾಗಿದೆ. ಹೊಡೆದಾಟದಲ್ಲಿ ಮೂವರೂ ಗಾಯಗೊಂಡಿದ್ದು, ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಛೋಟು ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗಾಯಗೊಂಡಿದ್ದ ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿರುವ ಸುರತ್ಕಲ್‌ ಪೊಲೀಸರು ಐಪಿಸಿ ಸೆಕ್ಷನ್‌ 302 ಅಡಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!