Friday, June 5, 2026
Homeಕರಾವಳಿಪಬ್ ನಲ್ಲಿ ಮಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಮೋಜು ಮಸ್ತಿ: ಪಾರ್ಟಿ ನಿಲ್ಲಿಸಿ ವಿದ್ಯಾರ್ಥಿಗಳನ್ನು ಬೈದು ಕಳುಹಿಸಿದ...

ಪಬ್ ನಲ್ಲಿ ಮಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಮೋಜು ಮಸ್ತಿ: ಪಾರ್ಟಿ ನಿಲ್ಲಿಸಿ ವಿದ್ಯಾರ್ಥಿಗಳನ್ನು ಬೈದು ಕಳುಹಿಸಿದ ಬಜರಂಗದಳ ಕಾರ್ಯಕರ್ತರು

- Advertisement -
- Advertisement -

ಮಂಗಳೂರು: ಪಬ್ ನಲ್ಲಿ ಕಾಲೇಜು ವಿದ್ಯಾರ್ಥಿಗಳ ಪಾರ್ಟಿಗೆ ಬಜರಂಗದಳ ತಡೆ ಒಡ್ಡಿದ ಘಟನೆ ನಿನ್ನೆ ರಾತ್ರಿ ಮಂಗಳೂರು ನಗರದಲ್ಲಿ ನಡೆದಿದೆ.‌

ಮಂಗಳೂರಿನ ರಿ-ಸೈಕಲ್ ದಿ ಲಾಂಜ್ ಪಬ್ ನಲ್ಲಿ ಮಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ಪಾರ್ಟಿ ನಡೆಯುತ್ತಿದ್ದ ಪಾರ್ಟಿಗೆ ಅಡ್ಡಿ ಪಡಿಸಲಾಗಿದೆ.

ಯುವಕ-ಯುವತಿಯರಿಂದ ಕಾಲೇಜು ಬೀಳ್ಕೊಡುಗೆ ನೆಪದಲ್ಲಿ ಪಬ್ ನಲ್ಲಿ ಮದ್ಯ ಸೇವಿಸಿ ಮೋಜು ಮಸ್ತಿ ನಡೆಸಿದ ಆರೋಪ ಕೇಳಿ ಬಂದಿದೆ.

ಪಬ್ ಒಳಗೆ ತೆರಳಿ ಪಾರ್ಟಿ ಬಜರಂಗದಳದ ಕಾರ್ಯಕರ್ತರು
ಪಾರ್ಟಿ ನಿಲ್ಲಿಸುವಂತೆ ಸೂಚಿಸಿ ಬೈದು ವಿದ್ಯಾರ್ಥಿಗಳನ್ನು ಹೊರ ಕಳುಹಿಸಿದ್ದಾರೆ.

ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬಜರಂಗದಳದ ಕಾರ್ಯಕರ್ತರನ್ನು ಸ್ಥಳದಿಂದ ಕಳುಹಿಸಿದ್ದು, ಪಾರ್ಟಿ ಅರ್ಧದಲ್ಲೇ ನಿಲ್ಲಿಸಿ ಕಾಲೇಜು ವಿದ್ಯಾರ್ಥಿಗಳು ಜಾಗ ಖಾಲಿ ಮಾಡಿದ್ದಾರೆ.

ತುಂಡುಡುಗೆ ತೊಟ್ಟು ಮದ್ಯಪಾನ ಮಾಡಿ ವಿದ್ಯಾರ್ಥಿಗಳಿಂದ ಮೋಜು ಮಸ್ತಿ ಆರೋಪ ವ್ಯಕ್ತವಾಗಿದ್ದು,‌ ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

2009ರಲ್ಲಿ ಇದೇ ಪಬ್ ಮೇಲೆ ಶ್ರೀರಾಮ ಸೇನೆ ದಾಳಿ ನಡೆಸಿ ದೇಶಾದ್ಯಂತ ಸುದ್ದಿಯಾಗಿತ್ತು.

- Advertisement -

Latest News

error: Content is protected !!