Friday, June 5, 2026
Homeಕರಾವಳಿಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿಚಾರಣೆ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿಚಾರಣೆ

- Advertisement -
- Advertisement -

ತೀರ್ಥಹಳ್ಳಿ: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ ಸಂಬಂಧ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕಾಂಗ್ರೆಸ್‌ ಕಚೇರಿ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಲ್ಲದೇ, ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್‌ ಅವರನ್ನು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಪ್ರಕರಣದ ಆರೋಪಿ ಶಾರೀಖ್‌ ಕುಟುಂಬದ ಆಸ್ತಿಯನ್ನು ಕಾಂಗ್ರೆಸ್‌ ಪಕ್ಷ, ಕಚೇರಿಯನ್ನಾಗಿ 10 ಲಕ್ಷ ರೂ. ಲೀಸ್‌ಗೆ ಪಡೆದಿತ್ತು. ಈ ವರ್ಷ ಜೂನ್‌ ತಿಂಗಳಿಗೆ ಈ ಲೀಸ್‌ ಮುಕ್ತಾಯವಾಗುತ್ತದೆ. ಈ ಹಿನ್ನೆಲೆ ಕಾಂಗ್ರೆಸ್‌ ಕಚೇರಿ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!