Saturday, October 17, 2026
Homeಕರಾವಳಿಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಎನ್ ಐಎಗೆ ವರ್ಗಾವಣೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಎನ್ ಐಎಗೆ ವರ್ಗಾವಣೆ

- Advertisement -
- Advertisement -

ಬೆಂಗಳೂರು: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಾಗುರಿಯಲ್ಲಿ ಇತ್ತೀಚೆಗೆ ನಡೆದ ಕುಕ್ಕರ್ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಮುಂದಿನ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ ಎನ್ ಐಎಗೆ ವರ್ಗಾಯಿಸಲು ರಾಜ್ಯ ಸರಕಾರ ನಿರ್ಧರಿಸಿದೆ.

ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ, ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡಿದೆ.

ಯುಎಪಿಎ ಕಾಯಿದೆ ಅನ್ವಯ ತನಿಖೆಯನ್ನು ನಡೆಸಲು ರಾಜ್ಯ ಸರ್ಕಾರದಿಂದ ಶಿಫಾರಸು ಮಾಡಲಾಗಿದೆ.

- Advertisement -

Latest News

error: Content is protected !!