Monday, May 6, 2024
Homeಕರಾವಳಿಮಂಗಳೂರು: ಕಟೀಲು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಟೈಂ ಫಿಕ್ಸ್ ಮಾಡಿರುವ ಜಿಲ್ಲಾಡಳಿತ!

ಮಂಗಳೂರು: ಕಟೀಲು, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಟೈಂ ಫಿಕ್ಸ್ ಮಾಡಿರುವ ಜಿಲ್ಲಾಡಳಿತ!

spot_img
- Advertisement -
- Advertisement -

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಕಟೀಲು, ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರ ವರೆಗೆ ಮಾತ್ರ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಜೊತೆಗೆ ತೀರ್ಥ ಪ್ರಸಾದ, ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಸುತ್ತೋಲೆ ಹೊರಡಿಸಿದ್ದಾರೆ.

ಮುಂದಿನ ಆದೇಶದವರೆಗೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವಸ್ಥಾನಗಳು ಭಕ್ತಾದಿಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮಾತ್ರ ತೆರೆದಿರುತ್ತದೆ. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗೃತಾ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ಕೇವಲ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ತೀರ್ಥ ಪ್ರಸಾದ, ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿರುವುದಿಲ್ಲ.

ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಹಾಗೂ ವಸತಿ ಗೃಹಗಳಲ್ಲಿ ತಂಗುವುದಾಗಲೀ ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ

ಶನಿವಾರ ಮತ್ತು ಭಾನುವಾರಗಳಂದು ಎಲ್ಲಾ ರೀತೀಯ ಉತ್ಸವ, ಸೇವೆಗಳು, ತೀರ್ಥ, ಪ್ರಸಾದ, ಮುಡಿ ಸೇವೆ, ವಸತಿಗಳನ್ನು ನಿರ್ಬಂಧಿಸಿ, ಅರ್ಚಕರುಗಳಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಿದೆ.ಜಾತ್ರೆಗಳು, ದೇವಾಲಯದ ಉತ್ಸವಗಳು ಮೆರವಣಿಗೆಗಳು ಇತ್ಯಾದಿಗಳನ್ನು ನಿಷೇಧಿಸಿದೆ.

ಈ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ – 2005 ರ ಕಲಂ 51 ರಿಂದ 60 ರನ್ವಯ, ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರ ಕಲಂ 4, 5 ಮತ್ತು 10 ರಂತೆ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳು, ಜಿಲ್ಲಾ ವಿಪ್ಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!