Monday, May 20, 2024
Homeಕರಾವಳಿಮಂಗಳೂರು: ಕೋವಿಡ್ ನಿಯಂತ್ರಣಕ್ಕೆ ಹಲವು ನಿರ್ಬಂಧಗಳನ್ನು ಜಾರಿ ಮಾಡಿದ ಜಿಲ್ಲಾಧಿಕಾರಿ!

ಮಂಗಳೂರು: ಕೋವಿಡ್ ನಿಯಂತ್ರಣಕ್ಕೆ ಹಲವು ನಿರ್ಬಂಧಗಳನ್ನು ಜಾರಿ ಮಾಡಿದ ಜಿಲ್ಲಾಧಿಕಾರಿ!

spot_img
- Advertisement -
- Advertisement -

ಮಂಗಳೂರು: ರಾಜ್ಯ ಸರ್ಕಾರದ ಆದೇಶ ಹಾಗೂ ಜಿಲ್ಲೆಯ ವಿದ್ಯಮಾನಗಳನ್ನು ಗಮನಿಸಿ, ಕೋವಿಡ್-19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಕೆಲವು ನಿರ್ಬಂಧಗಳನ್ನು ಜಾರಿ ಮಾಡಿದ್ದಾರೆ.

ವಿವಾಹ ಅಥವಾ ಕೌಟುಂಬಿಕ ಕಾರ್ಯಗಳನ್ನು ಗರಿಷ್ಠ 50 ಜನರ ಪರಿಮಿತಿಗೊಳಪಟ್ಟು ಆಯೋಜಿಸಲು ಅನುಮತಿಸಿದೆ. ಸ್ಥಳೀಯ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಹಾಗೂ ಕಂದಾಯ ಅಧಿಕಾರಿಗಳು ಸಮಾರಂಭಕ್ಕೆ ಭೇಟಿ ನೀಡಿ ಕೋವಿಡ್‌ ನಿಯಮಾವಳಿ ಉಲ್ಲಂಘನೆ ಆಗದಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಅತ್ಯವಶ್ಯಕ ಮತ್ತು ತುರ್ತು ಕಾರ್ಯ ಚಟುವಟಿಕೆಗಳನ್ನು ಹೊರತುಪಡಿಸಿ, ಶುಕ್ರವಾರ ಸಂಜೆ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜನರ ಓಡಾಟವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಕೋವಿಡ್-19 ನಿಯಂತ್ರಣ ಮತ್ತು ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಎಲ್ಲ ಕಚೇರಿಗಳ ಅಧಿಕಾರಿ, ಸಿಬ್ಬಂದಿಗೆ ಓಡಾಟಕ್ಕೆ ಅವಕಾಶ ನೀಡಲಾಗಿದೆ. ತುರ್ತು ಸೇವೆಗಳನ್ನು ನಿರ್ವಹಿಸುವ ಮತ್ತು ನಿರಂತರ ಕಾರ್ಯಾಚರಣೆ ಅಗತ್ಯವಿರುವ ಎಲ್ಲ ಕೈಗಾರಿಕೆಗಳು, ಕಂಪನಿಗಳು ಮತ್ತು ಸಂಸ್ಥೆಗಳಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ನಂದಿನಿ ಹಾಲು ಮಾರಾಟ ಮಳಿಗೆಗಳಿಗೆ ಮಾತ್ರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.ಈ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ, ಚಾಲ್ತಿಯಲ್ಲಿರುವ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಿ ಪರೀಕ್ಷೆಗಳಿಗೆ ಹಾಜರಾಗಲು ಅನುಮತಿ ನೀಡಲಾಗಿದೆ. ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತವಾಗಿ ವಿದ್ಯಾರ್ಥಿಗಳ ಪ್ರಯಾಣದ ಪಾಸ್ ಎಂದು ಪರಿಗಣಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತುರ್ತು ಚಿಕಿತ್ಸೆ ಅಗತ್ಯವಿರುವ ರೋಗಿಗಳು ಮತ್ತು ಅವರ ಪರಿಚಾರಕರು ಅಥವಾ ವ್ಯಕ್ತಿಗಳಿಗೆ ಸಂಚರಿಸಲು ಅನುಮತಿ ಇದೆ. 24×7 ಅವಧಿಯಲ್ಲಿ ಎಲ್ಲ ಸಾಮಗ್ರಿಗಳನ್ನು ಹೋಂ ಡೆಲಿವೆರಿಗೆ ಅವಕಾಶ ನೀಡಲಾಗಿದೆ. ರೆಸ್ಟೋರೆಂಟ್‌ ಮತ್ತು ಹೊಟೇಲ್‌ಗ‌ಳಲ್ಲಿ ಆಹಾರವನ್ನು ಮನೆಗೆ ತೆಗೆದುಕೊಂಡು ಹೋಗಲು ಮತ್ತು ಹೋಂ ಡೆಲಿವರಿ ನೀಡಲು ಮಾತ್ರ ಅನುಮತಿ ನೀಡಲಾಗಿದೆ. ಬಸ್‌, ರೈಲು ಮತ್ತು ವಿಮಾನ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ವಿದ್ಯಾಭ್ಯಾಸಕ್ಕಾಗಿ ಬರುವ ಎಲ್ಲ ವಿದ್ಯಾರ್ಥಿಗಳು 72 ಗಂಟೆಗಳ ಒಳಗಿನ ಆರ್‌ಟಿಪಿಸಿಆರ್‌ ನೆಗೆಟಿವ್ ವರದಿ ತರುವುದು ಕಡ್ಡಾಯ. ಜಿಲ್ಲೆಗೆ ಬರುವ ಇಂತಹ ವಿದ್ಯಾರ್ಥಿಗಳನ್ನು 7 ದಿನಗಳ ಕಾಲ ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಪಡಿಸಿ, 7 ದಿನಗಳ ನಂತರ ಕಡ್ಡಾಯವಾಗಿ ಆರ್‌ಟಿಪಿಸಿಆರ್‌ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಮಾರ್ಗಸೂಚಿಯು ಕೇರಳದಿಂದ ಉದ್ಯೋಗಕ್ಕಾಗಿ ಜಿಲ್ಲೆಗೆ ಬರುವ ಅಥವಾ ಭೇಟಿ ಕಾರಣಕ್ಕಾಗಿ ಬರುವ ಪ್ರತಿಯೊಬ್ಬರಿಗೆ ಅನ್ವಯವಾಗಲಿದೆ, ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ಸಂದರ್ಭದಲ್ಲಿ ಕಡ್ಡಾಯವಾಗಿ ಆರ್‌ಟಿಪಿಸಿಆರ್‌ ವರದಿಯನ್ನು ಹಾಜರುಪಡಿಸಬೇಕು. ನೆಗೆಟಿವ್ ವರದಿಯನ್ನು ಹೊಂದಿರುವುದನ್ನು ಅಧಿಕಾರಿಗಳು ಖಾತರಿಪಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ.

- Advertisement -
spot_img

Latest News

error: Content is protected !!