Friday, April 19, 2024
HomeUncategorizedಝಿಕಾ ಸೋಂಕು: ದಕ್ಷಿಣ ಕನ್ನಡದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ

ಝಿಕಾ ಸೋಂಕು: ದಕ್ಷಿಣ ಕನ್ನಡದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ

spot_img
- Advertisement -
- Advertisement -

ಮಂಗಳೂರು: ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಅಗತ್ಯ ಝಿಕಾ ವೈರಸ್ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ನಿರ್ದೇಶನ ನೀಡಿದ್ದಾರೆ.

ಗುರುವಾರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದ.ಕ. ಜಿಲ್ಲೆಗೆ ಕೇರಳದಿಂದ ಸಾಕಷ್ಟು ಜನರು ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಕಾರ್ಯಗಳಿಗೆ ಬಂದು – ಹೋಗುತ್ತಾರೆ. ಕೇರಳ ರಾಜ್ಯದಿಂದ ಬರುವ ಎಲ್ಲ ರೋಗಿಗಳ ಬಗ್ಗೆ ನಿಗಾವಹಿಸಬೇಕು, ಯಾವುದೇ ಜ್ವರವಿದ್ದರೂ ಸಮೀಪದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸುವಂತೆ ತಿಳಿಸಬೇಕು, ಎಲ್ಲ ಸ್ಯಾನಿಂಗ್‌ ಹಾಗೂ ಹೆರಿಗೆ ಆಸ್ಪತ್ರೆಗಳ ಮುಖ್ಯಸ್ಥರು ತಮ್ಮಲ್ಲಿ ದಾಖಲಾಗುವ ಗರ್ಭಿಣಿಯರಲ್ಲಿ ಅಂಗಾಂಗ ನ್ಯೂನತೆ (ಮೈಕ್ರೋ ಸಫಾಲಿ) ಕಾಣಿಸಿಕೊಂಡಿದ್ದರೆ ಕೂಡಲೇ ಸಂಬಂಧಪಟ್ಟವರ ರಕ್ತ ಪರೀಕ್ಷೆಯನ್ನು ನಡೆಸಲು ಕ್ರಮ ತೆಗೆದುಕೊಂಡು ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಎಂದರು.

ಡೆಂಗ್ಯೂ ಹಾಗೂ ಚಿಕುನ್‌ಗುನ್ಯಾ ತರಹದ ಲಕ್ಷಣಗಳನ್ನು ಝೀಕಾ ಸೋಂಕು ಹೊಂದಿದ್ದು, ಮುಖ್ಯವಾಗಿ ರೋಗಿಯ ಪ್ರವಾಸದ ಇತಿಹಾಸವನ್ನು ತಿಳಿದುಕೊಳ್ಳಬೇಕು ಎಂದು ಸೂಚಿಸಿದರು.

ಈಡಿಸ್ ಪ್ರಭೇದದ ಸೊಳ್ಳೆಯ ಕಡಿತದಿಂದ ಹೆಚ್ಚಾಗಿ ಈ ವೈರಸ್ ಹರುಡುತ್ತದೆ. ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತದೆ. ತೀವ್ರಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿ ಕೊಳ್ಳುವುದು ಇದರ ಪ್ರಮುಖ ಲಕ್ಷಣಗಳಾಗಿವೆ.

ಈ ಸೊಳ್ಳೆಗಳು ನೀರಿನ ಸಿಮೆಂಟ್‌ ತೊಟ್ಟಿ, ಬ್ಯಾರಲ್‌, ಇತರ ನೀರಿನ ಸಂಗ್ರಹಣೆಗಳು, ಹೂವಿನ ಕುಂಡಗಳು, ಮನೆಯ ಮೇಲ್ಫಾವಣಿಗಳಲ್ಲಿ ನಿಂತ ನೀರು, ಟಯರ್‌, ಘನತ್ಯಾಜ್ಯಗಳಿಂದ ಉತ್ಪತ್ತಿಯಾಗುತ್ತವೆ. ಆದುದರಿಂದ ಇಲ್ಲೆಲ್ಲ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದರು. ಸಭೆಯಲ್ಲಿ ಜಿ.ಪಂ. ಸಿಇಒ ಸಹಿತಿ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು

- Advertisement -
spot_img

Latest News

error: Content is protected !!