Monday, May 20, 2024
Homeಕರಾವಳಿಮಂಗಳೂರು: ಸೆಪ್ಟೆಂಬರ್ 15ರವರೆಗೆ ಸ್ನಾತಕ ಮತ್ತು ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಆರಂಭಿಸದಂತೆ ಡಿಸಿ ಸೂಚನೆ!

ಮಂಗಳೂರು: ಸೆಪ್ಟೆಂಬರ್ 15ರವರೆಗೆ ಸ್ನಾತಕ ಮತ್ತು ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಆರಂಭಿಸದಂತೆ ಡಿಸಿ ಸೂಚನೆ!

spot_img
- Advertisement -
- Advertisement -

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಸೆಪ್ಟೆಂಬರ್ 15ರವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ನಡೆಸದಂತೆ ಸೂಚಿಸಿದ್ದು, ಆನ್‍ಲೈನ್ ಮೂಲಕವೇ ತರಗತಿಗಳನ್ನೂ ತೆಗೆದುಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಅವರು ನಿರ್ದೇಶನ ನೀಡಿದ್ದಾರೆ.

ಕೋವಿಡ್‌ ಹಿನ್ನೆಲೆಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಭೌತಿಕ ತರಗತಿ ಗಳನ್ನು ಪ್ರಾರಂಭಿಸುವ ಕುರಿತು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.



ಪ್ರಸ್ತುತ ಜಿಲ್ಲೆಯ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಸೆಪ್ಟೆಂಬರ್ 15ರೊಳಗೆ ಕಡಿಮೆಯಾದಲ್ಲಿ ಮತ್ತೊಮ್ಮೆ ಸಂಬಂಧಪಟ್ಟ ಕಾಲೇಜು ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಭೌತಿಕ ತರಗತಿಗಳನ್ನು ಪ್ರಾರಂಭಿಸಲು ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗಳನ್ನು ಬ್ಯಾಚ್‌ವೈಸ್ ಮೂಲಕ ಕೋವಿಡ್ ಮಾರ್ಗಸೂಚಿಗಳ ಅನುಸಾರವೇ ನಡೆಸಬೇಕು. ವಿಜ್ಞಾನ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ವಿಭಾಗಗಳ ವಿದ್ಯಾರ್ಥಿ ಗಳಿಗೆ ಆನ್‌ಲೈನ್ ಮೂಲಕವೇ ತರಗತಿಗಳನ್ನು ನಡೆಸುವಂತೆ ಸೂಚನೆ ನೀಡಿದ್ದಾರೆ.

ಕಾಲೇಜಿನ ಬೋಧಕ ಮತ್ತು ಬೋಧ‌ಕೇತರ ಸಿಬ್ಬಂದಿ ಕಡ್ಡಾಯವಾಗಿ ಕೋವಿಡ್‌ ನಿರೋಧಕ ಲಸಿಕೆ ಪಡೆದಿರಬೇಕು. ಪಡೆಯದ ಸಿಬ್ಬಂದಿಯ ಮಾಹಿತಿಯನ್ನು ಕಾಲೇಜು ಶಿಕ್ಷಣಾಧಿಕಾರಿಗಳು ನೀಡಬೇಕು ಎಂದು ಸೂಚಿಸಿದ ಅವರು, ನೆಟ್‌ವರ್ಕ್‌ ಸಮಸ್ಯೆಯಿಂದ ಗ್ರಾಮೀಣ ಕೆಲವು ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳಿಗೆ ಹಾಜರಾಗುವುದು ಸಮಸ್ಯೆಯಾಗಿದೆ. ಜಿಲ್ಲಾಡಳಿತದಿಂದ ಪರ್ಯಾಯ ಮಾರ್ಗ ಹುಡುಕಿ ಅಂತವರಿಗೆ ತರಗತಿಗಳಿಗೆ ಹಾಜರಾಗುವ ವ್ಯವಸ್ಥೆ ಮಾಡಲಾಗುವುದು ಎಂದರು.

ಎಡಿಸಿ ಡಾ| ಪ್ರಜ್ಞಾ ಅಮ್ಮೆಂಬಳ, ಮಂಗಳೂರು ವಿ.ವಿ. ಕುಲಸಚಿವ ಕಿಶೋರ್‌ ಕೆ., ಕಾಲೇಜು ಶಿಕ್ಷಣ ವಿಶೇಷ ಅಧಿಕಾರಿ ಜಯಕರ ಭಂಡಾರಿ, ನಿಟ್ಟೆ ವಿ.ವಿ. ನೋಡಲ್‌ ಅಧಿಕಾರಿ ಡಾ| ದಾನೇಶ್‌ ಮೊದಲಾದವರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!