Thursday, June 4, 2026
Homeಕರಾವಳಿಮಂಗಳೂರು: ಕೆನಡಾದಲ್ಲಿ  ಕೆಲಸ ಕೊಡಿಸುವಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚನೆ

ಮಂಗಳೂರು: ಕೆನಡಾದಲ್ಲಿ  ಕೆಲಸ ಕೊಡಿಸುವಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚನೆ

- Advertisement -
- Advertisement -

ಮಂಗಳೂರು: ಕೆನಡಾದಲ್ಲಿ  ಕೆಲಸ ಕೊಡಿಸುವಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ವ್ಯಕ್ತಿಯೋರ್ವರು ವಿದೇಶದಲ್ಲಿ ಉದ್ಯೋಗಾವಕಾಶದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ಮಾ. 28ರಂದು ಇನ್‌ಸ್ಟಾಗ್ರಾಂ ಖಾತೆಯ ಮೂಲಕ ವಿಲಿಯಂ ಪೌಲ್‌ ಆಯಂಟನಿಯ ಪರಿಚಯವಾಗಿತ್ತು.

ಆತ ತಾನು ಕೆನಡಾ ದೇಶದ ಪ್ರಜೆಯಾಗಿದ್ದು, ಇಮಿಗ್ರೇಷನ್‌ ಅಧಿಕಾರಿಯಾಗಿರುವುದಾಗಿ ಪರಿಚಯಿಸಿಕೊಂಡು ಕೆನಡಾ ದೇಶದಲ್ಲಿ ಉದ್ಯೋಗ ಒದಗಿಸಿಕೊಡುವುದಾಗಿ ನಂಬಿಸಿದ್ದ. ಅನಂತರ ವಾಟ್ಸಾಪ್ ಮೂಲಕ ನಿರಂತರ ಸಂಪರ್ಕದಲ್ಲಿದ್ದ. ಉದ್ಯೋಗ ನೇಮಕಾತಿಯ ಬಗ್ಗೆ ವಿವಿಧ ದಾಖಲೆಗಳನ್ನು ಕಳುಹಿಸುತ್ತಿದ್ದ. ನೇಮಕಾತಿಯ ಬಗ್ಗೆ ವಿವಿಧ ಕಾರಣಗಳನ್ನು ನೀಡಿ ಮಾ. 28ರಿಂದ ಜೂ. 9ರ ನಡುವೆ ಹಂತ ಹಂತವಾಗಿ 4.80 ಲ.ರೂ.ಗಳನ್ನು ವರ್ಗಾಯಿಸಿಕೊಂಡು ಬಳಿಕ ಉದ್ಯೋಗ ಒದಗಿಸದೆ ವಂಚಿಸಿದ್ದಾನೆ. ಈ ಬಗ್ಗೆ ಮಂಗಳೂರಿನ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!