Friday, May 17, 2024
Homeಕರಾವಳಿಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ಹಿಂಸಾಚಾರ, ಬಂಧಿತ 22 ಮಂದಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ಹಿಂಸಾಚಾರ, ಬಂಧಿತ 22 ಮಂದಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

spot_img
- Advertisement -
- Advertisement -

ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ 2019ರ ಡಿಸೆಂಬರ್ 19ರಂದು ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ಎಸಗಿದ ಆರೋಪ ಎದುರಿಸುತ್ತಿರುವ 22 ಮಂದಿ ಬಂಧಿತರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ.

ಮಂಗಳೂರು ಗಲಭೆ ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಒಟ್ಟು ನಾಲ್ಕು ಚಾರ್ಜ್ ಶೀಟ್‌ಗಳನ್ನು ಮಂಗಳೂರಿನ 2ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ. ಗೋಲಿಬಾರ್‌ಗೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಪೊಲೀಸ್‌ ಠಾಣೆಯಲ್ಲಿ ಮೂರು ಪ್ರಕರಣ, ದಕ್ಷಿಣ ಠಾಣೆಯಲ್ಲಿ 13 ಪ್ರಕರಣ ದಾಖಲಾಗಿತ್ತು. ಮುಖ್ಯ ಪ್ರಕರಣ ಸೇರಿದಂತೆ ಮೂರು ಪ್ರಕರಣಗಳನ್ನು ಸಿಐಡಿಗೆ ಹಸ್ತಾಂತರಿಸಲಾಗಿತ್ತು.

ಮಂಗಳೂರಿನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸ್‌ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟು, 9ಕ್ಕೂ ಹೆಚ್ಚು ಮಂದಿ ಗುಂಡೇಟಿನಿಂದ ಗಾಯಗೊಂಡಿದ್ದರು. ಅಲ್ಲದೆ, ಲಾಠಿಚಾರ್ಜ್‌ನಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ಅಂದು ಹಿಂಸಾಚಾರದಲ್ಲಿ ಪಾಲ್ಗೊಂಡಿದ್ದ ಮಂದಿ ಪೊಲೀಸರನ್ನೇ ಕೊಲೆ ಮಾಡುವ ದುಷ್ಕ್ಯತ್ಯಕ್ಕೆ ಕೈ ಹಾಕಿರುವುದು ಸಿಸಿಟಿವಿ ಗಳಲ್ಲಿ ಸೆರೆ ಸಿಕ್ಕ ದೃಶ್ಯಗಳಿಂದ ಸಾಬೀತಾಗಿತ್ತು.

- Advertisement -
spot_img

Latest News

error: Content is protected !!