ಮಂಗಳೂರು: ಹನ್ನೆರಡು ವರ್ಷಗಳ ಹಿಂದೆ ಅಂದರೆ 2012ರ ಜುಲೈ 28 ರಂದು ಭಾರೀ ಸದ್ದು ಮಾಡಿದ್ದ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳು ಖುಲಾಸೆಗೊಂಡಿದ್ದಾರೆ.
ಈ ಹೋಂ ಸ್ಟೇ ಪ್ರಕರಣವು ರಾಷ್ಟ್ರಮಟ್ಟದಲ್ಲೂ ಭಾರೀ ಸದ್ದು ಮಾಡಿ ಸುದ್ದಿಯಾಗಿತ್ತು. ಸಂಘಟನೆಯೊಂದರ ಕಾರ್ಯಕರ್ತರು ಪಡೀಲ್ ಬಳಿಯ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ಮೇಲೆ ದಾಳಿ ನಡೆಸಿದ್ದರು. ಬರ್ತ್ ಡೇ ಪಾರ್ಟಿಯಲ್ಲಿ ನಿರತರಾಗಿದ್ದ ಯುವಕ-ಯುವತಿಯರ ಮೇಲೂ ದಾಳಿ ನಡೆಸಲಾಗಿತ್ತು ಎಂದು ಮಂಗಳೂರು ಗ್ರಾಮಾಂತರ ಪೊಲೀಸರು 44 ಆರೋಪಿಗಳ ವಿರುದ್ದ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.
ಹಲ್ಲೆ ನಡೆಸಿದ ಪ್ರಕರಣದ ವಿಚಾರಣೆ ಆ.6ರಂದು ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿದ್ದು, ತೀರ್ಪು ಹೊರಬಂದಿದೆ. ಮಹತ್ತರ ತೀರ್ಪು ಪ್ರಕಟವಾಗಿದೆ.
ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿಗಳು ದೋಷಮುಕ್ತರಾಗಿದ್ದಾರೆ ಎಂದು ನ್ಯಾಯಾಧೀಶ ಕಾಂತರಾಜು ಆದೇಶ ನೀಡಿದ್ದಾರೆ. ಈ ಪ್ರಕರಣದಲ್ಲಿ ಒಟ್ಟು 44 ಆರೋಪಿಗಳ ಪೈಕಿ ಮೂವರು ಸಾವನ್ನಪ್ಪಿದ್ದು ,ಓರ್ವ ಪತ್ರಕರ್ತ ನವೀನ್ ಸೂರಿಂಜೆ ಮೇಲಿದ್ದ ಪ್ರಕರಣ ನ್ಯಾಯಾಲಯ ಕೈಬಿಟ್ಟಿತ್ತು.ಹಿಂದೂ ಜಾಗರಣಾ ವೇದಿಕೆಯ ಮುಖಂಡ ಸುಭಾಷ್ ಪಡಿಲ್ ಸೇರಿದಂತೆ ಒಟ್ಟು 40 ಆರೋಪಿಗಳು ಖುಲಾಸೆಗೊಂಡಿದ್ದಾರೆ. ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ. 2012ರ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ಇಂದು ಇಲ್ಲಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ತೀರ್ಪು ನೀಡಿದರು.