Thursday, June 4, 2026
Homeಕರಾವಳಿಮಂಗಳೂರುಮಂಗಳೂರು ; ಪಣಂಬೂರು ಸಿಗ್ನಲ್ ಬಳಿ ಭೀಕರ ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಸಾವು

ಮಂಗಳೂರು ; ಪಣಂಬೂರು ಸಿಗ್ನಲ್ ಬಳಿ ಭೀಕರ ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಸಾವು

- Advertisement -
- Advertisement -

ಮಂಗಳೂರು ; ಪಣಂಬೂರು ಸಿಗ್ನಲ್ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ  ರಾಷ್ಟ್ರೀಯ ಹೆದ್ದಾರಿ 66 ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.

ಪಣಂಬೂರು ಸಿಗ್ನಲ್‌ನಲ್ಲಿ ವಾಹನಗಳು ನಿಂತಿದ್ದು ಹಸು ರಸ್ತೆ ದಾಟುತ್ತಿದ್ದ ಸಂದರ್ಭ ಮೊದಲಿಗೆ ಗ್ಯಾಸ್ ಟ್ಯಾಂಕರ್ ನವನು ನಿಲ್ಲಿಸಿದ್ದಾನೆ . ಅದರ ಹಿಂದೆ ಬರುತ್ತಿದ್ದ ಆಟೋರಿಕ್ಷಾ ನಿಲ್ಲಿಸಿದಾಗ ಅದರ ಹಿಂದೆ ಇದ್ದಂತಹ ಇನ್ನೊಬ್ಬ ಚಾಲಕನು ಕೂಡ ನಿಲ್ಲಿಸಿರುತ್ತಾನೆ. ಅದೇ ಸಂದರ್ಭದಲ್ಲಿ ಹಿಂದುಗಡೆಯಿಂದ ಬರುತ್ತಿದ್ದ ಇನ್ನೊಂದು ಟ್ಯಾಂಕರ್ ರಭಸವಾಗಿ ವಾಹನಕ್ಕೆ ಡಿಕ್ಕಿ ಹೊಡೆದಾಗ ಇನ್ನೋವಾ ಕಾರು ರಭಸಕ್ಕೆಮುಂದೆ ಇದ್ದ ಅಟೋರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ.

ಈ ವೇಳೆ ಆಟೊ ರಿಕ್ಷಾ ಎರಡು ಟ್ಯಾಂಕರ್ ಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾಗಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ..

- Advertisement -

Latest News

error: Content is protected !!