Friday, May 3, 2024
Homeಕರಾವಳಿಮಂಗಳೂರು ವಿಮಾನ ನಿಲ್ದಾಣಕ್ಕೆ ಅಕ್ರಮವಾಗಿ ಪ್ರವೇಶಿಸಿದ ಶಂಕಿತ ವ್ಯಕ್ತಿ: ಅಕ್ರಮ ಪ್ರವೇಶದಡಿ ಪ್ರಕರಣ ದಾಖಲು

ಮಂಗಳೂರು ವಿಮಾನ ನಿಲ್ದಾಣಕ್ಕೆ ಅಕ್ರಮವಾಗಿ ಪ್ರವೇಶಿಸಿದ ಶಂಕಿತ ವ್ಯಕ್ತಿ: ಅಕ್ರಮ ಪ್ರವೇಶದಡಿ ಪ್ರಕರಣ ದಾಖಲು

spot_img
- Advertisement -
- Advertisement -

ಮಂಗಳೂರು: ಮಂಗಳೂರು ಹಳೆ ವಿಮಾನ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಸೋಮವಾರ ರಾತ್ರಿ ಕಂಡು ಬಂದಿದ್ದು, ವಿಮಾನ ನಿಲ್ದಾಣದೊಳಗೆ ಅಕ್ರಮವಾಗಿ ಪ್ರವೇಶಿಸಿದ್ದಾನೆ ಎಂಬ ಆರೋಪಡಿ ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಸೋಮವಾರ ರಾತ್ರಿ ಸುಮಾರು 11 ಗಂಟೆಗೆ ಸಿಐಎಸ್‌ಎಫ್ ಸಿಬ್ಬಂದಿಯು ಗಸ್ತು ತಿರುಗುತ್ತಿದ್ದಾಗ ರನ್‌ವೇ ಕಾಮಗಾರಿ ನಡೆಯುತ್ತಿದ್ದ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕಂಡು ಬಂದಿದ್ದ. ಅನಧಿಕೃತವಾಗಿ ನುಗ್ಗಿದ ವ್ಯಕ್ತಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಪಶ್ಚಿಮ ಬಂಗಾಲದ ಮುರ್ಸಿದಾಬಾದ್ ನ ಬಧುಹಾ ಗ್ರಾಮ ದ ನಿವಾಸಿ ರಾಕೇಶ್ ಎಂದು ಹೇಳಿಕೊಂಡಿದ್ದಾನೆ.

ಈತ ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದು, ತನ್ನ ಜೊತೆ ಇದ್ದ ಲಾರಿ ಡ್ರೈವರ್ ತನಗೆ ಸಂಬಳ ನೀಡದೆ ಇಲ್ಲೇ ಸಮೀಪದಲ್ಲಿ ಬಿಟ್ಟು ಹೋಗಿದ್ದು ದಾರಿ ಕಾಣದೇ ವಿಮಾನ ನಿಲ್ದಾಣ ಎಂದು ತಿಳಿಯದೇ ಈ ಭಾಗಕ್ಕೆ ಬಂದಿರುತ್ತೇನೆ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ. ಆರೋಪಿ ವಿರುದ್ದ ಅ.ಕ್ರ 129/2021 ಕಲಂ:448 ಐಪಿಸಿ ಮತ್ತು 3A(b) ಪ್ರಕರಣ ದಾಖಲಿಸಿ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

- Advertisement -
spot_img

Latest News

error: Content is protected !!