- Advertisement -
- Advertisement -
ಮಂಗಳೂರು: ನಗರದಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಮೂವರು ಮಹಿಳಾ ಸಿಬ್ಬಂದಿಗೆ ಮಚ್ಚಿನಿಂದ ಹಲ್ಲೆ ನಡೆಸಿದ ಆರೋಪಿ ನವೀನ್ ಶೆಟ್ಟಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿ ವಿರುದ್ದ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಕಾನೂನು ಪ್ರಕ್ರಿಯೆ ವೇಳೆ ಯಾವುದೇ ರೀತಿಯ ವಿನಾಯಿತಿ ನೀಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಕೆ:
ಹಲ್ಲೆಗೊಳಗಾದ ಮೂವರು ಮಹಿಳಾ ಸಿಬಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಮಾನಸಿಕ ಅಸ್ವಸ್ಥನಾಗಿರುವ ಹಿನ್ನಲೆಯಲ್ಲಿ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
- Advertisement -