Friday, June 5, 2026
Homeಕರಾವಳಿಮಂಗಳೂರು: ದೇವಸ್ಥಾನದ ಬಳಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣು

ಮಂಗಳೂರು: ದೇವಸ್ಥಾನದ ಬಳಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣು

- Advertisement -
- Advertisement -

ಮಂಗಳೂರು: ನಗರದ ಕುಳಾಯಿ ದೇವಸ್ಥಾನವೊಂದರ ಸಮೀಪದ ಖಾಲಿ ಜಾಗದಲ್ಲಿ ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತನನ್ನು ಬೈಕಂಪಾಡಿ ಸಮೀಪ ಕೂರಿಕಟ್ಟದಲ್ಲಿ ವಾಸವಿದ್ದ ಬಾಗಲಕೋಟೆ ಮೂಲದ ಕೂಲಿ ಕಾರ್ಮಿಕ ಸುನಿಲ್ (24 ವ) ಎಂದು ಗುರುತಿಸಲಾಗಿದೆ.

ಬೆಳಗ್ಗೆ ಕೆಲಸಕ್ಕೆ ಹೋಗುವ ಜನರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷಗೆ ಸಾಗಿಸಿದರು. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!