Monday, April 29, 2024
Homeಅಪರಾಧಮಂಗಳೂರು: ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಯತ್ನ, ಆರೋಪಿಯ ಬಂಧನ...!!

ಮಂಗಳೂರು: ಮಗುವಿನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಯತ್ನ, ಆರೋಪಿಯ ಬಂಧನ…!!

spot_img
- Advertisement -
- Advertisement -

ಮಂಗಳೂರು: ನಗರದ ಹೊಯ್ಗೆ ಬಜಾರ್ ಎಂಬಲ್ಲಿ ಒಣ ಮೀನು ಸಂಸ್ಕರಣ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ದಂಪತಿಯ ಎರಡು ವರ್ಷದ ಮಗುವಿನ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯವೆಸಗಿ, ಉಪ್ಪು ನೀರಿನ ಮೀನಿನ ತೊಟ್ಟಿಗೆ ಮಗುವನ್ನು ಎಸೆದ ಘಟನೆ ಭಾನುವಾರ ಸಂಜೆ ನಡೆದಿದೆ.

ಮಗು ಪ್ರಾಣಾಪಾಯದಿಂದ ಪಾರಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ಚಂದನ್ ಎಂದು ಗುರುತಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್, ಮಗುವಿನ ತಂದೆ ತಾಯಿ ಸಂಜೆ ಕೆಲಸ ಮಾಡ ಬಂದಾಗ ಮಗು ನಾಪತ್ತೆಯಾಗಿತ್ತು. ಮಗುವನ್ನು ಹುಡುಕಾಡಿದಾಗ ರಾತ್ರಿ 9 ಗಂಟೆ ಸುಮಾರಿಗೆ ಉಪ್ಪು ನೀರಿನ ಮೀನಿನ ತೊಟ್ಟಿಯಲ್ಲಿ ಮಗು ಪತ್ತೆಯಾಗಿದೆ. ನಂತರ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.

ಪೊಲೀಸ್ ತನಿಖೆಯ ವೇಳೆ ಚಂದನ್ ಮಗುವನ್ನು ಕರೆದುಕೊಂಡು ಹೋಗಿರುವುದು ಗೊತ್ತಾಗಿದೆ. ವಶಕ್ಕೆ ಪಡೆದ ವಿಚಾರಣೆ ನಡೆಸಿದಾಗ ಆತ ಲೈಂಗಿಕ ದೌರ್ಜನ್ಯ ಮಾಡಿರುವ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ಮಗು ಸದ್ಯ ಚೇತರಿಕೆ ಕಾಣುತ್ತಿದೆ ಎಂದು ಶಶಿಕುಮಾರ್ ಮಾಹಿತಿ ನೀಡಿದರು. ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!