Monday, April 29, 2024
Homeಕರಾವಳಿಮಂಗಳೂರು: ಲಾರಿಯಲ್ಲಿದ್ದ ಗ್ರಾನೈಟ್ ಮೈಮೇಲೆ ಬಿದ್ದು ಯುವಕ ಸಾವು

ಮಂಗಳೂರು: ಲಾರಿಯಲ್ಲಿದ್ದ ಗ್ರಾನೈಟ್ ಮೈಮೇಲೆ ಬಿದ್ದು ಯುವಕ ಸಾವು

spot_img
- Advertisement -
- Advertisement -

ಮಂಗಳೂರು: ಲಾರಿಯಲ್ಲಿದ್ದ ಗ್ರಾನೈಟ್ ನ ಫೋಟೋ ತೆಗೆಯಲು ತೆರಳಿರುವ ವೇಳೆಯಲ್ಲಿ ಆಕಸ್ಮಿಕವಾಗಿ ಗ್ರಾನೈಟ್ ಮೈಮೇಲೆ ಬಿದ್ದು, ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ನಗರದ ಅತ್ತಾವರದಲ್ಲಿ ಶನಿವಾರ ರಾತ್ರಿ ನಡೆದಿದೆ. ಜೆಪ್ಪು ನಿವಾಸಿ ಹಮೀದ್ ಎಂಬವರ ಪುತ್ರ ಅಬ್ದುರ್ರಹ್ಮಾನ್ ರಿಲ್ವಾನ್(30) ಮೃತಪಟ್ಟವರು.

ಘಟನೆಯ ವಿವರ:
ಅತ್ತಾವರದಲ್ಲಿ ನಿರ್ಮಾಣ ಹಂತದ ಕಟ್ಟಡಕ್ಕೆ ರಾಜಸ್ಥಾನದಿಂದ ಗ್ರಾನೈಟ್ ತುಂಬಿದ ಲಾರಿ ಬಂದಿತ್ತು. ಈ ವೇಳೆ ಕಟ್ಟಡದ ರೈಟರ್ ಆಗಿದ್ದ ರಿಲ್ವಾನ್ ರಲ್ಲಿ ಗ್ರಾನೈಟ್‌ನ ಫೋಟೊ ತೆಗೆಯಲು ಕಟ್ಟಡದ ಸೂಪರ್ ವೈಸರ್ ಸೂಚಿಸಿದ್ದಾರೆನ್ನಲಾಗಿದೆ. ಅದರಂತೆ ಫೋಟೊ ತೆಗೆಯಲು ಅವರು ಲಾರಿಯ ಹಿಂಬದಿಗೆ ತೆರಳಿದ್ದರೆನ್ನಲಾಗಿದೆ. ಈ ವೇಳೆ ಲಾರಿಯಲ್ಲಿದ್ದ ಗ್ರಾನೈಟ್ ಏಕಾಏಕಿ ರಿಲ್ವಾನ್ರ ಮೈಮೇಲೆ ಬಿದ್ದಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!