Tuesday, July 14, 2026
Homeಕರಾವಳಿಮಂಗಳೂರು: ಬುದ್ಧಿಮಾಂದ್ಯೆಯ ಮೇಲೆ ಅತ್ಯಾಚಾರ

ಮಂಗಳೂರು: ಬುದ್ಧಿಮಾಂದ್ಯೆಯ ಮೇಲೆ ಅತ್ಯಾಚಾರ

- Advertisement -
- Advertisement -

ಮಂಗಳೂರು: ಬುದ್ಧಿಮಾಂದ್ಯೆಯ ಮೇಲೆ ಪಾಪಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಸುರತ್ಕಲ್ ಸಮೀಪ ನಡೆದಿದೆ.ರಾಜ್‌ಭಟ್ (65) ಅತ್ಯಾಚಾರವೆಸಗಿದ ಆರೋಪಿ. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೂರಿಂಜೆ ಮೂಲದ ಆರೋಪಿ ರಾಜ್‌ಭಟ್ ಬ್ರೋಕರ್ ಕೆಲಸ ಮಾಡಿಕೊಂಡಿದ್ದು, ಚೇಳಾಯಾರು ಪದವು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾನೆ.

ಮಾ.27ರಂದು ಆರೋಪಿಯು ಬುದ್ಧಿಮಾಂದ್ಯೆಯನ್ನು ಆಕೆಯ ಮನೆಯಲ್ಲಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯು ವಿವಾಹಿತನಾಗಿದ್ದು, ಪತ್ನಿ ಮತ್ತು ಮಕ್ಕಳಿಂದ ದೂರವಾಗಿದ್ದಾನೆ ಎಂದು ತಿಳಿದುಬಂದಿದೆ. ಅತ್ಯಾಚಾರ ಎಸಗಿದ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗುತ್ತಲೇ ಆರೋಪಿಯು ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ

- Advertisement -

Latest News

error: Content is protected !!