Wednesday, June 24, 2026
Homeಕರಾವಳಿಮಂಗಳೂರುಮಂಗಳೂರು; ಆಟೋದಲ್ಲಿ ಮರೆತಿದ್ದ 25 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್ ಅನ್ನು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ...

ಮಂಗಳೂರು; ಆಟೋದಲ್ಲಿ ಮರೆತಿದ್ದ 25 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್ ಅನ್ನು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ

- Advertisement -
- Advertisement -

ಮಂಗಳೂರು; ಆಟೋದಲ್ಲಿ ಪ್ರಯಾಣಿಕರು ಮರೆತಿದ್ದ 25 ಲಕ್ಷ ಮೌಲ್ಯದ ಚಿನ್ನಾಭರಣಗಳಿದ್ದ ಬ್ಯಾಗ್ ಅನ್ನು ವಾರಸುದಾರರಿಗೆ ಒಪ್ಪಿಸಿ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದ ಘಟನೆ ಮಂಗಳೂರಿನಲ್ಲಿ ನಡೆದಿದೆ.


ಮಲ್ಲಿಕಟ್ಟೆ ನಿವಾಸಿ ಶ್ರೀಮತಿ ಲೋಲಿಟ್ಟ ಹಾಗೂ ಅವರ ಕುಟುಂಬದವರು ಮಲ್ಲಿಕಟ್ಟೆಯಿಂದ ಮೇರಿ ಹಿಲ್ ಕಡೆಗೆ ಆಟೋ ರಿಕ್ಷಾದಲ್ಲಿ ಪ್ರಯಾಣಿಸಿದ್ದರು. ಈ ಸಂದರ್ಭದಲ್ಲಿ ಚಿನ್ನಾಭರಣಗಳಿದ್ದ ತಮ್ಮ ವ್ಯಾನಿಟಿ ಬ್ಯಾಗ್ ಅನ್ನು ಅವರು ಆಟೋದಲ್ಲಿಯೇ ಮರೆತು ಇಳಿದಿದ್ದರು. ಬ್ಯಾಗ್ ನಾಪತ್ತೆಯಾಗಿರುವುದು ಗಮನಕ್ಕೆ ಬರುತ್ತಿದ್ದಂತೆ ಗಾಬರಿಗೊಂಡ ಕುಟುಂಬದವರು ತಕ್ಷಣ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.


ದೂರು ಸ್ವೀಕರಿಸಿದ ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಆಟೋ ರಿಕ್ಷಾವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು. ಆಟೋ ಚಾಲಕ ರೋಷನ್ ಅವರು ಕೂಡ ಬ್ಯಾಗ್ ಸಿಕ್ಕ ತಕ್ಷಣ ಪ್ರಾಮಾಣಿಕತೆ ಮೆರೆದು ಪೊಲೀಸರಿಗೆ ಸಹಕರಿಸಿದರು. ಆಟೋ ಚಾಲಕನ ಸಹಕಾರದಿಂದ ಪತ್ತೆಯಾದ ಬ್ಯಾಗ್‌ನಲ್ಲಿದ್ದ ₹25 ಲಕ್ಷ ಮೌಲ್ಯದ ಆಭರಣಗಳನ್ನು ಮಂಗಳೂರು ಪೂರ್ವ ಪೊಲೀಸ್ ಉಪನಿರೀಕ್ಷಕರ ಸಮ್ಮುಖದಲ್ಲಿ ಲೋಲಿಟ್ಟ ಅವರಿಗೆ ಹಸ್ತಾಂತರಿಸಲಾಯಿತು. ಪೊಲೀಸರ ತ್ವರಿತ ಸ್ಪಂದನೆ ಮತ್ತು ಚಾಲಕ ರೋಷನ್ ಅವರ ಪ್ರಾಮಾಣಿಕತೆಗೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.

- Advertisement -

Latest News

error: Content is protected !!