Monday, June 8, 2026
Homeಕರಾವಳಿಮಂಗಳೂರುಮಂಗಳೂರು; 15 ವರ್ಷಗಳಿಂದ ಡಾಂಬರು ಕಾಣದೆ ಹದಗೆಟ್ಟ ರಸ್ತೆ;  ಚುನಾವಣಾ ಬಹಿಷ್ಕಾರ ಹಾಗೂ ಸಾಮೂಹಿಕ ರಾಜೀನಾಮೆಗೆ...

ಮಂಗಳೂರು; 15 ವರ್ಷಗಳಿಂದ ಡಾಂಬರು ಕಾಣದೆ ಹದಗೆಟ್ಟ ರಸ್ತೆ;  ಚುನಾವಣಾ ಬಹಿಷ್ಕಾರ ಹಾಗೂ ಸಾಮೂಹಿಕ ರಾಜೀನಾಮೆಗೆ ನಿರ್ಧರಿಸಿದ ಬಿಜೆಪಿ ಪದಾಧಿಕಾರಿಗಳು

- Advertisement -
- Advertisement -

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಸೂರಿಂಜೆ ಹೋಬಳಿಯ ಸೂರಿಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂರಿಂಜೆ–ಪುಚ್ಚಾಡಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಕಳೆದ ಹದಿನೈದು ವರ್ಷಗಳಿಂದ ಡಾಮರೀಕರಣ ಕಂಡಿಲ್ಲ. ಈ ಕುರಿತು ಪಕ್ಷದ ಕಾರ್ಯಕರ್ತರಾಗಿ ನಾವು ಪಕ್ಷದ ಮುಖಂಡರ ಗಮನಕ್ಕೆ ಹಲವು ಬಾರಿ ತಂದಿದ್ದು, ಕಳೆದ ಐದು ವರ್ಷಗಳಿಂದ ಗ್ರಾಮ ಪಂಚಾಯಿತಿಗೆ ಅನೇಕ ಬಾರಿ ಅರ್ಜಿಗಳನ್ನು ಸಲ್ಲಿಸಿದ್ದರೂ ಇದುವರೆಗೆ ರಸ್ತೆ ದುರಸ್ತಿ, ಡಾಮರೀಕರಣ ಅಥವಾ ಕಾಂಕ್ರೀಟೀಕರಣ ಕಾರ್ಯಗಳು ನಡೆದಿಲ್ಲ.ಇದರಿಂದ ಪಕ್ಷದ ಕಾರ್ಯಕರ್ತರು ಹಾಗೂ ನಮ್ಮ ಪಕ್ಷ ಬೆಂಬಲಿತ ಗ್ರಾಮಸ್ಥರು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು, ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಜನರ ಈ ನ್ಯಾಯಯುತ ಬೇಡಿಕೆಗೆ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ, 159ನೇ ಪುಚ್ಚಾಡಿ ಸೂರಿಂಜೆ ಬೂತ್‌ನ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಸಲ್ಲಿಸಿ, ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವುದು ಅನಿವಾರ್ಯವಾಗಿದೆ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

- Advertisement -

Latest News

error: Content is protected !!