Thursday, June 4, 2026
Homeತಾಜಾ ಸುದ್ದಿಮಳಲಿ ಮಸೀದಿಯ ಒಂದು ಹಿಡಿ ಮರಳನ್ನೂ ಕೊಡಲಾರೆವು: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಮಳಲಿ ಮಸೀದಿಯ ಒಂದು ಹಿಡಿ ಮರಳನ್ನೂ ಕೊಡಲಾರೆವು: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

- Advertisement -
- Advertisement -

ಮಂಗಳೂರು: ಮಂಗಳೂರಿನಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮಳಲಿ ಮಸೀದಿಯ ಕುರಿತು ಖಡಕ್ ಹೇಳಿಕೆಯನ್ನು ನೀಡಿದ್ದಾರೆ.

ಮಳಲಿ ಮಸಿದಿಯ ಒಂದು ಹಿಡಿ ಮರಳನ್ನೂ ಕೊಡಲಾರೆವು. ಮಸೀದಿ ಬಿಟ್ಟುಕೊಡುತ್ತಾರೆ ಅನ್ನೋ ಕನಸು ಕಾಣಬೇಡಿ. ಈ ದೇಶ ನಮ್ಮದು, ಇದಕ್ಕಾಗಿ ರಕ್ತ ಹರಿಸಿದ್ದೇವೆ. ಮಳಲಿ ಮಸೀದಿ ವಿಚಾರದಲ್ಲಿ ಮಾತಾಡದಂತೆ ತಮ್ಮ ಶಾಸಕರಿಗೆ ಡಿಕೆಶಿ ಹೇಳಿದ್ದಾರೆ ಎಂದು ಅಬ್ದುಲ್ ಮಜೀದ್ ತಿಳಿಸಿದ್ದಾರೆ.

ಕಾಂಗ್ರೆಸ್ ರಾಜಕಾರಣ ಮುಸ್ಲಿಮರ ಪರ ಅಲ್ಲ ಅನ್ನೋದನ್ನು ತಿಳಿದುಕೊಳ್ಳಿ. ತಾಂಬೂಲ ಪ್ರಶ್ನೆ ಎಂದು ಬರುವವರನ್ನು ಪೊಲೀಸರು ಒದ್ದು ಒಳಗೆ ಹಾಕಬೇಕು. ‘ಪೂಜಾ ಸ್ಥಳ ಕಾಯ್ದೆ 1991’ ಪ್ರಕಾರ ಮೂರು ವರ್ಷ ಜೈಲಿಗೆ ಹಾಕಬೇಕು. ಈ ಆ್ಯಕ್ಟ್ ಅನ್ನು ಪೊಲೀಸರು ಓದಿಲ್ವೇ?  2006ರಲ್ಲಿ ಸಂಡೂರಿನ ಸುಗ್ಗುಲಮ್ಮ ದೇವಾಲಯ ಒಡೆದು ಹಾಕಿದ್ದರಲ್ಲ. ಸಂಘ ಪರಿವಾರದ ಕಾರ್ಯಕರ್ತರು ತಾಕತ್ತಿದ್ದರೆ ಅದರ ಬಗ್ಗೆ ತಾಂಬೂಲ ಪ್ರಶ್ನೆ ಇಡಲಿ. ಮಾಜಿ ಸಚಿವ ಜನಾರ್ದನ ರೆಡ್ಡಿ, ಸಚಿವ ಶ್ರೀರಾಮುಲು ಧ್ವಂಸಗೊಳಿಸಿದ್ದರಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

- Advertisement -

Latest News

error: Content is protected !!