- Advertisement -
- Advertisement -
ಮಂಗಳೂರು:ಕಳೆದ ಕೆಲವು ದಿನಗಳಿಂದ ಕರಾವಳಿಯ ಮೀನುಗಾರಿಕಾ ಬೊಟ್ ಗಳಿಗೆ ಒಂದಿಲ್ಲೊಂದು ಸಮಸ್ಯೆ ತಪ್ಪುತ್ತಿಲ್ಲ. ಇಂದು ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಗುಚಿ 6 ಮಂದಿ ಮೀನುಗಾರರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.ಬೋಳಾರದ ಶ್ರೀರಕ್ಷಾ ಎಂಬ ಬೋಟ್ ಮಂಗಳೂರು ಮೀನುಗಾರಿಕಾ ಬಂದರಿನಿಂದ ಆಳ ಸಮುದ್ರದ ಮೀನುಗಾರಿಕೆಗೆ ತೆರಳಿತ್ತು.
ಆದರೆ ಬೋಟ್ ವಾಪಸ್ ಬರುವಾಗ ಮುಳುಗಡೆಯಾಗಿದೆ ಎನ್ನಲಾಗಿದೆ. ದೋಣಿಯಲ್ಲಿ 20 ಕ್ಕೂ ಹೆಚ್ಚು ಮೀನುಗಾರರಿದ್ದು, ದುರಂತದ ಸಂದರ್ಭದಲ್ಲಿ 16 ಮಂದಿ ಪಾರಾಗಿದ್ದಾರೆ 6 ಮಂದಿ ಮೀನುಗಾರರು ನಾಪತ್ತೆಯಾಗಿದ್ದಾರೆ.
ಸ್ಥಳಕ್ಕೆ ಕರಾವಳಿ ರಕ್ಷಣಾ ಪಡೆ ಆಗಮಿಸಿದ್ದು, ನಾಪತ್ತೆಯಾದವರ ಪತ್ತೆಗೆ ಕಾರ್ಯಾಚರಣೆ ಪ್ರಗತಿಯಲ್ಲಿದೆ.
- Advertisement -