Thursday, June 4, 2026
Homeಕರಾವಳಿಮಂಗಳೂರು: 11 ತಿಂಗಳ ಮಗುವನ್ನು ಅನಾಥ ಮಾಡಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ಮಂಗಳೂರು: 11 ತಿಂಗಳ ಮಗುವನ್ನು ಅನಾಥ ಮಾಡಿ ಆತ್ಮಹತ್ಯೆ ಮಾಡಿಕೊಂಡ ತಾಯಿ

- Advertisement -
- Advertisement -

ಮಂಗಳೂರು: ನಗರದ ಹೊರವಲಯದ ಬಜಪೆ ವಿಠಲ ರುಕುಮಾಯಿ ಭಜನಾ ಮಂದಿರ ಸಮೀಪದಲ್ಲಿ ವಿವಾಹಿತ ಮಹಿಳೆಯೊಬ್ಬರು ಫ್ಯಾನ್​​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ಮಹಿಳೆಯನ್ನು ಬಜಪೆ ವಿಠಲ ರುಕುಮಾಯಿ ಭಜನಾ ಮಂದಿರ ಸಮೀಪದ ನಿವಾಸಿ ಶಿಲ್ಪಾ (28) ಎಂದು ಗುರುತಿಸಲಾಗಿದೆ.

ಬಜ್ಪೆ ಪೇಟೆಯ ಜ್ಯುವೆಲ್ಲರಿ ಅಂಗಡಿಯೊಂದರ ಮಾಲಕರೊಬ್ಬರ ಪುತ್ರಿಯಾಗಿದ್ದು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಊರಿಗೆ ಬಂದಿದ್ದ ಈಕೆ ‘ಮನೆಯಿಂದಲೇ ಕೆಲಸ’ ನಿರ್ವಹಿಸುತ್ತಿದ್ದರು. ಈಕೆಯ ಪತಿ ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದಾರೆ. ಈಕೆಗೆ 11 ತಿಂಗಳ ಮಗುವಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಆತ್ಮಹ್ಯೆ ಮಾಡಿಕೊಂಡಿದ್ದಾರೆ. ಆದರೆ ಡೆತ್‌ನೋಟ್‌ನಲ್ಲಿನ ಮಾಹಿತಿಯು ಅಸ್ಪಷ್ಟತೆಯಿಂದ ಕೂಡಿದ್ದು ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ, ಬಜ್ಪೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!